ಥಾಣೆ: ಬಸ್ಸಿಗಾಗಿ ಕಾದು ನಿಂತಿದ್ದವರ ಮೇಲೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ನಾಲ್ವರು ದುರ್ಮರಣವನ್ನಪ್ಪಿ, 5 ಮಂದಿಗೆ ಗಂಭೀರ ಗಾಯವಾಗಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಶಹಪುರದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ದುರ್ಘಟನೆಯಲ್ಲಿ ಮೃತಪಟ್ಟವರು ಹಾಗೂ ಗಾಯಾಳುಗಳು ಇಂದು ಬೆಳಿಕ್ಕೆ ಕಿಹಾನ್ವಾಲಿ ಸೇತುವೆ ಬಳಿ ನಾಶಿಕ್'ಗೆ ತೆರಳಲು ಬಸ್ಸಿಗಾಗಿ ಕಾದು ನಿಂತಿದ್ದರು ಈ ವೇಳೆ ವೇಗವಾಗಿ ಬಂದ ಕಾರು ನಿಂತಿದ್ದವರ ಮೇಲೆ ಹರಿದು ಹೋಗಿದೆ. ಪರಿಣಾಮ ಸ್ಥಳದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆಂದು ಪೊಲೀಸರು ಹೇಳಿದ್ದಾರೆ.
ಘಟನೆ ಕುರಿತಂತೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಮಿಸಿದ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲು ಮಾಡಿದ್ದಾರೆ. ಇಬ್ಬರು ಅಪ್ರಾಪ್ರ ಬಾಲಕಿಯರು ಹಾಗೂ ದಂಪತಿಗಳು ಘಟನೆಯಲ್ಲಿ ಗಾಯಗೊಂಡಿದ್ದು, ಶಹಪುರ ಗ್ರಾಮೀಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಭವಿಸಿದ ಬಳಿಕ ಸ್ಥಳೀಯ ಶಾಸಕ ಪಾಂಡುರಂಗ ಬರೋರಾ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಕಾರು ಡಿಕ್ಕಿ ಹೊಡೆದ ಬಳಿಕ ಕೆಲವರು ಸೇತುವೆಯಿಂದ ಕೆಳಗೆ ಬಿದ್ದಿದ್ದಾರೆಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics