ಮಧ್ಯ ಪ್ರದೇಶ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಮಹಿಳೆಯರ ಸುರಕ್ಷತೆ, ಉದ್ಯೋಗದ ಭರವಸೆ
ಮಧ್ಯಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಭೂಪಾಲ್ : ಮಧ್ಯಪ್ರದೇಶ ವಿಧಾನಸಭಾ ಚುನಾವಣಾ ಪ್ರಚಾರದ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಿಜೆಪಿ ಇಂದು ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ.
ಕೇಂದ್ರ ಸಚಿವರಾದ ಅರುಣ್ ಜೇಟ್ಲಿ, ಧರ್ಮೇಂದ್ರ ಪ್ರಧಾನ್ ಸಮ್ಮುಖದಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.
ಸಮಾರಂಭದಲ್ಲಿ ಪಾಲ್ಗೊಂಡಿದ್ದ ವಿತ್ತ ಸಚಿವ ಅರುಣ್ ಜೇಟ್ಲಿ ಮಾತನಾಡಿ, ರಾಜಕೀಯ ಕಾರಣಕ್ಕಾಗಿ ನೋಟ್ ಅಮಾನ್ಯೀಕರಣಗೊಳಿಸಿಲ್ಲ, ಇದು ಅತ್ಯಂತ ಹೆಚ್ಚಿನ ನೈತಿಕತೆಯಿಂದ ಕೂಡಿದ್ದಾಗಿದೆ ಎಂದು ಸಮರ್ಥಿಸಿಕೊಂಡರು.
ನೋಟು ಅಮಾನ್ಯತೆಯಿಂದ ತೆರಿಗೆ ಪಾವತಿ ಹೆಚ್ಚಾಗಿದೆ. ಅಲ್ಲದೇ ಕೇಂದ್ರ ಹಾಗೂ ರಾಜ್ಯದ ಆದಾಯ ಸಂಗ್ರಹ ಪ್ರಮಾಣದಲ್ಲಿ ತೀವ್ರ ರೀತಿಯಲ್ಲಿ ಹೆಚ್ಚಾಗಿದೆ ಎಂದು ಅರುಣ್ ಜೇಟ್ಲಿ ಹೇಳಿದರು.