ಸಂಗ್ರಹ ಚಿತ್ರ 
ದೇಶ

ಜಾರಿ ನಿರ್ದೇಶನಾಲಯದ ಮುಖ್ಯಸ್ಥರಾಗಿ ಸಂಜಯ್ ಮಿಶ್ರಾ ನೇಮಕ!

ಜಾರಿ ನಿರ್ದೇಶನಾಲಯದ ನೂತನ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ನವದೆಹಲಿ: ಜಾರಿ ನಿರ್ದೇಶನಾಲಯದ ನೂತನ ಮುಖ್ಯಸ್ಥರಾಗಿ ಸಂಜಯ್ ಕುಮಾರ್ ಮಿಶ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ದೆಹಲಿಯ ಆದಾಯ ತೆರಿಗೆ ಇಲಾಖೆ ಮುಖ್ಯ ಆಯುಕ್ತರಾಗಿದ್ದ ಸಂಜಯ್ ಮಿಶ್ರಾ ಅವರು ಬಳಿಕ ಅಕ್ಟೋಬರ್ 27ರಂದು ಮೂರು ತಿಂಗಳ ಅವಧಿಗೆ ಜಾರಿ ನಿರ್ದೇಶನಾಲಯಕ್ಕೆ ಹಂಗಾಮಿ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ಅವರನ್ನು ಪೂರ್ಣಾವಧಿಗೆ ಇಡಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯ ನೇಮಕಾತಿ ಸಮಿತಿ (ಎಸಿಸಿ) ಶನಿವಾರ ರಾತ್ರಿ ಮಿಶ್ರಾ ಅವರನ್ನು ನೇಮಕ ಮಾಡಿ, ಆದೇಶ ಹೊರಡಿಸಿದೆ. ಮುಂದಿನ ಎರಡು ವರ್ಷಗಳವರೆಗೆ ಮಿಶ್ರಾ ಇಡಿಯ ಅಧಿಕಾರದಲ್ಲಿರುತ್ತಾರೆ. ಇಡಿಯ ಮುಖ್ಯಸ್ಥ ಸ್ಥಾನವು ಕೇಂದ್ರ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ಸಮಾನವಾಗಿದೆ.
ಮಿಶ್ರಾ ಅವರು ಭಾರತೀಯ ಕಂದಾಯ ಸೇವೆಯ (ಐಆರ್ ಎಸ್) 1984 ಬ್ಯಾಚ್, ಆಧಾರ ತೆರಿಗೆ ಕೇಡರ್​ನ ಅಧಿಕಾರಿಯಾಗಿದ್ದು, ಎನ್ ಡಿಟಿವಿ ಪ್ರಕರಣ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣಗಳ ತನಿಖೆಯಲ್ಲಿ ಮಿಶ್ರಾ ಅವರು ಬಹು ಮಹತ್ವದ ಪಾತ್ರ ವಹಿಸಿದ್ದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!