ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ 
ದೇಶ

ಬಿಜೆಪಿ ವಿರೋಧಿ ಮೈತ್ರಿ: ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಆಂಧ್ರ ಸಿಎಂ

ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಮಹಾಮೈತ್ರಿ....

ಕೋಲ್ಕತಾ: ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ವಿರುದ್ಧ ಮಹಾಮೈತ್ರಿ ರಚನೆಯ ಭಾಗವಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ  ಎನ್‌ ಚಂದ್ರಬಾಬು ನಾಯ್ಡು ಅವರು ಸೋಮವಾರ ಪಶ್ಚಿಮ ಬಂಗಾಳ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದಾರೆ.
ಇಂದು ಕೋಲ್ಕತಾದ ನಬನ್ನಾದಲ್ಲಿ ದೀದಿಯನ್ನು ಭೇಟಿ ಮಾಡಿದ ಚಂದ್ರ ಬಾಬು ನಾಯ್ಡು ಅವರು, ನವೆಂಬರ್ 22ರಂದು ದೆಹಲಿಯಲ್ಲಿ ನಡೆಯುವ ಪ್ರತಿಪಕ್ಷಗಳ ನಾಯಕರ ಸಭೆಗೆ ಮಮತಾ ಬ್ಯಾನರ್ಜಿ ಅವರನ್ನು ಆಹ್ವಾನಿಸಿದ್ದಾರೆ.
ನಾಯ್ಡು ಅವರು ಮಹಾಮೈತ್ರಿಯ ರಚನೆಯ ಭಾಗವಾಗಿ ಇತ್ತೀಚಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಜೆಡಿಎಸ್‌ ಮುಖ್ಯಸ್ಥ, ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಮತ್ತು ಡಿಎಂಕೆ ಮುಖ್ಯಸ್ಥ ಎಂ ಕೆ ಸ್ಟಾಲಿನ್‌ ಸೇರಿದಂತೆ ಹಲವು ಪ್ರತಿಪಕ್ಷ ನಾಯಕರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದ ನಾಯ್ಡು ಅವರು, 2019ರ ಚುನಾವಣೆಯಲ್ಲಿ ಬಿಜೆಪಿಯನ್ನು ಹಣಿಯಲು ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!