ದೇಶ

ಶಬರಿಮಲೆ: ಬಂಧಿತರು ಕ್ರಿಮಿನಲ್ ಹಿನ್ನಲೆಯುಳ್ಳ ಆರ್ ಎಸ್ಎಸ್ ವ್ಯಕ್ತಿಗಳು - ಕೇರಳ ಸಿಎಂ

Lingaraj Badiger
ತಿರುವನಂತಪುರಂ: ಶಬರಿಮಲೆ ಸನ್ನಿಧಾನಂನಲ್ಲಿ ಬಂಧಿಸಲಾದ 69 ವ್ಯಕ್ತಿಗಳು ಭಕ್ತರಲ್ಲ. ಅವರೆಲ್ಲಾ ಕ್ರಿಮಿನಲ್ ಹಿನ್ನಲೆಯುಳ್ಳ ಆರ್ ಎಸ್ ಎಸ್ ಕಾರ್ಯಕರ್ತರು ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಮಂಗಳವಾರ ಹೇಳಿದ್ದಾರೆ.
ಇಂದು ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಕೇರಳ ಸಿಎಂ, ಶಬರಿಮಲೆಯನ್ನು ರಣರಂಗವಾಗಿಸುವ ಅಜೆಂಡಾದೊಂದಿಗೆ ಕರ ಸೇವಕರು ಅಲ್ಲಿಗೆ ಆಗಮಿಸಿದ್ದಾರೆ. ಶಬರಿಮಲೆಯನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ. ಇದರಲ್ಲಿ ಕಾಂಗ್ರೆಸ್ ಸಹ ಭಾಗಿಯಾಗಿದೆ. ಆದರೆ ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ ಎಂದಿದ್ದಾರೆ.
ಶಬರಿಮಲೆ ವಿವಾದದ ಸಂಪೂರ್ಣ ಲಾಭ ಪಡೆಯಲು ಬಿಜೆಪಿ ನಾಯಕರು ಹಾಗೂ ಸಚಿವರು ಅಲ್ಲಿಗೆ ಹೋಗಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ ಶಬರಿಮಲೆಯಲ್ಲಿ ಗಲಭೆ ಸೃಷ್ಟಿಸಲು ಅವಕಾಶ ನೀಡಲುವುದಿಲ್ಲ ಎಂದು ಸಿಎಂ ಹೇಳಿದ್ದಾರೆ.
ನಿನ್ನೆ ಶಬರಿಮಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘಿಸಿದ್ದ 69 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡ ಸಿಎಂ, ಈ ಕ್ರಮದಿಂದಾಗಿ ಅಲ್ಲಿನ ಪರಿಸ್ಥಿತಿ ಸ್ವಲ್ಪ ತಿಳಿಗೊಂಡಿದೆ ಎಂದಿದ್ದಾರೆ.
SCROLL FOR NEXT