ಬಿಜೆಪಿ ಹಿರಿಯ ನಾಯಕಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸುಷ್ಮಾ ಸ್ವರಾಜ್

2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ...

ಇಂದೋರ್: 2019ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕಿ ಹಾಗೂ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ. 
ಮಧ್ಯಪ್ರದೇಶದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪರ್ಧೆಗಿಳಿಸುವುದು ಪಕ್ಷದ ನಿರ್ಧಾರಕ್ಕೆ ಬಿಟ್ಟ ವಿಚಾರ. ಆದರೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬುದು ನನ್ನ ನಿರ್ಧಾರವಾಗಿದೆ ಎಂದು ಹೇಳಿದ್ದಾರೆ. 
ಬಿಜೆಪಿ ಹಿರಿಯ ನಾಯಕಿಯಾಗಿರುವ ಸುಷ್ಮಾ ಸ್ವರಾಜ್ ಅವರು, ಇಂದಿರಾ ಗಾಂಧಿ ನಂತರ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವೆಯಾಗಿರುವ ಎರಡನೇ ಮಹಿಳೆಯಾಗಿದ್ದಾರೆ. ಸಂಸದೆಯಾಗಿ 7 ಬಾರಿ ಮತ್ತು ವಿಧಾನಸಭಾ ಸದಸ್ಯೆಯಾಗಿ ಮೂರು ಬಾರಿ ಆಯ್ಕೆಯಾಗಿದ್ದಾರೆ. 
25ನೇ ವಯಸ್ಸಿನಲ್ಲಿಯೇ ಸುಷ್ಮಾ ಅವರು ಉತ್ತರ ಭಾರತದ ಹರಿಯಾಣ ರಾಜ್ಯದ ಅತ್ಯಂತ ಕಿರಿಯ ಸಂಪುಟ ಸಚಿವೆಯಾಗಿದ್ದರು. 1998ರಲ್ಲಿ ಅಲ್ಪಾವಧಿಗೆ ದೆಹಲಿಯ 5ನೇ ಮುಖ್ಯಮಂತ್ರಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಸೇವೆ ಸಲ್ಲಿಸಿರುವ ಅವರು, ಲೋಕಸಭೆಯಲ್ಲಿ ಬಿಜೆಪಿ ಹಾಗೂ ವಿರೋಧ ಪಕ್ಷದ ವಕ್ತಾರರಾಗಿ ಕಾರ್ಯನಿರ್ವಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

'ಮಕ್ಕಳನ್ನು ಪ್ರತಿಭಟನೆಗಳಿಂದ ದೂರವಿಡಿ': ದೆಹಲಿ ಪ್ರತಿಭಟನೆಗೆ ಸಿದ್ಧತೆ, ಮಸೀದಿ ಮೈಕ್‌ನಲ್ಲಿ ಪೊಲೀಸರ ಮನವಿ! Video

'ಜೀವನ ನರಕ, ನನ್ನ ಪಾಲಿನ ದೆವ್ವ ಸತ್ತಿದೆ, ಸತ್ತ ಮಾತ್ರಕ್ಕೆ ಪಾಪ ಕಳೆಯಲ್ಲ': ನಾನಾ ಪಾಟೇಕರ್ ವಿರುದ್ಧ ನಟಿ ತನುಶ್ರೀ ದತ್ತಾ ಮತ್ತೆ ಕಿಡಿ-Video

ಈ ಬಾರಿ ಮೈಸೂರು ದಸರಾ ಮತ್ತಷ್ಟು ಆಕರ್ಷಕ; 146 ಕಿ.ಮೀ. ದೀಪಾಲಂಕಾರ; 3,500 ಡ್ರೋನ್‌ಗಳ ಪ್ರದರ್ಶನ