ಮುಂಬೈ: ಸಾಲ ಮನ್ನಾ ಮತ್ತು ಬರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬರ ಪೀಡಿತ, ಬುಡಕಟ್ಟು ಅಹ್ಮದನಗರ್, ಉತ್ತರ ಮಹಾರಾಷ್ಟ್ರ, ಭುಸವಾಲ್, ಮಾರಾಠವಾಡ್ ಹಾಗೂ ವಿದರ್ಭ ಪ್ರದೇಶಗಳಿಂದ ಸುಮಾರು 30 ಸಾವಿರ ರೈತರು ವಾಣಿಜ್ಯ ನಗರಿಗೆ ಆಗಮಿಸಿದ್ದು, ಇಂದಿನಿಂದ ಎರಡು ದಿನಗಳ ಕಾಲ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಿದ್ದಾರೆ.
ರೈತರು ನಾಶಿಕ್ ನಲ್ಲಿ ಪ್ರತಿಭಟನೆ ನಡೆಸಿದ ನಂತರ ಈಗ ಮುಂಬೈ ಆಗಮಿಸಿದ್ದು, ಭೂ ಸುಧಾರಣೆ, ಸ್ವಾಮಿನಾಥನ್ ಸಮಿತಿ ವರದಿ ಜಾರಿಗೆ ಒತ್ತಾಯಿಸಿದ್ದಾರೆ.
ಥಾಣೆಯಿಂದ ರೈತರ ಪ್ರತಿಭಟನಾ ರ್ಯಾಲಿ ಆರಂಭವಾಗಿದ್ದು, ಸೋಮಯ್ಯ ಮೈದಾನದಲ್ಲಿ ಅಂತ್ಯಗೊಳ್ಳಲಿದೆ. ಲೋಕ ಸಂಘರ್ಷ ಮೋರ್ಚಾದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಆಮ್ ಆದ್ಮಿ ಪಕ್ಷದ ಮಹಾರಾಷ್ಟ್ರ ಘಟಕ, ಜೆಡಿಎಸ್ ಸೇರಿದಂತೆ ಹಲವು ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ರೈತರ ಪ್ರತಿಭಟನೆಗೆ ಬೆಂಬಲ ನೀಡಿವೆ.
ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮತಾನಾಡಿದ ಜೆಡಿಎಸ್ ರಾಷ್ಟ್ರೀಯ ವಕ್ತಾರ ತನ್ವೀರ್ ಅಹ್ಮದ್ ಅವರು, ದೇಶದ ಎಲ್ಲಾ ಭಾಗದಲ್ಲೂ ರೈತರು ಈ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ ಮಹಾರಾಷ್ಟ್ರದಲ್ಲಿ ಬಹಳ ದಿನಗಳಿಂದ ರೈತರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ವಿಶೇಷವಾಗಿ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪರಿಹರಿಸುವಲ್ಲಿ ಫಲವಾಗಿದ್ದಾರೆ. ಹೀಗಾಗಿಯೇ ರಾಜ್ಯದಲ್ಲಿ ಅತಿ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ದೂರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics