ಸೋನಿಯಾ ಗಾಂಧಿ-ಮೆಹಬೂಬಾ ಮುಫ್ತಿ 
ದೇಶ

ಕಣಿವೆ ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಎನ್ ಸಿ ಬೆಂಬಲಿತ ಪಿಡಿಪಿ-ಕಾಂಗ್ರೆಸ್ ಸರ್ಕಾರ ರಚನೆ?!

ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ನ್ಯಾಷನಲ್ ಕಾನ್ಫರೆನ್ಸ್ ಬೆಂಬಲದೊಂದಿಗೆ ಪಿಡಿಪಿ-ಕಾಂಗ್ರೆಸ್ ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು,  ನ್ಯಾಷನಲ್ ಕಾನ್ಫರೆನ್ಸ್ ಬೆಂಬಲದೊಂದಿಗೆ ಪಿಡಿಪಿ-ಕಾಂಗ್ರೆಸ್ ಸರ್ಕಾರ ರಚನೆಗೆ ಕಸರತ್ತು ನಡೆಯುತ್ತಿದೆ. 
 ರೀಡಿಫ್ ಜಾಲತಾಣದಲ್ಲಿ ಪ್ರಕಟವಾಗಿರುವ ವರದಿಯ ಪ್ರಕಾರ, ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಮೂರು ಪಕ್ಷಗಳು ಒಗ್ಗೂಡಲು ಚಿಂತನೆ ನಡೆದಿರುವುದರ ಬಗ್ಗೆ ಸ್ವತಃ ಮೂರೂ ಪಕ್ಷಗಳ ನಾಯಕರು ಸುಳಿವು ನೀಡಿದ್ದಾರೆ. ಡಿ.19 ಕ್ಕೆ ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಗೆ ಬಂದು 6 ತಿಂಗಳಾಗಲಿವೆ. ಈ ಬಳಿಕ ರಾಜ್ಯಪಾಲರ ಆಡಳಿತಾವಧಿಯನ್ನು ವಿಸ್ತರಣೆ ಮಾಡುವುದಕ್ಕೆ ಅವಕಾಶವಿಲ್ಲ. ಈ ಬಳಿಕ ರಾಷ್ಟ್ರಪತಿ ಆಡಳಿತ ಹೇರುವುದಕ್ಕೆ ಪ್ರಸ್ತಾವನೆ ಇದೆಯಾದರೂ ರಾಜ್ಯಪಾಲ ಸತ್ಯಪಾಲ್ ಮಲೀಕ್ ಮಾತ್ರ ಜಮ್ಮು-ಕಾಶ್ಮೀರ ವಿಧಾನಸಭೆ ವಿಸರ್ಜನೆಯ  ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. 
ಜೂ.16 ರಂದು ಪಿಡಿಪಿ-ಬಿಜೆಪಿ ಮೈತ್ರಿ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ಮುರಿದುಬಿದ್ದಿತ್ತು. ಈ ಬಳಿಕ ಪಿಡಿಪಿಯ ಒಂದಷ್ಟು ಶಾಸಕರನ್ನು ಸೆಳೆದು ಸಜ್ಜದ್ ಲೋನ್ ಅವರ ಪೀಪಲ್ಸ್ ಕಾನ್ಫರೆನ್ಸ್ ಪಕ್ಷದ ಇಬ್ಬರು ಶಾಸಕರು, ಬಿಜೆಪಿಯ 25 ಶಾಸಕರು ಸೇರಿ ಸರ್ಕಾರ ರಚನೆ ಮಾಡುವ ಸಾಧ್ಯತೆಗಳ ಬಗ್ಗೆಯೂ ಊಹಾಪೋಹವಿತ್ತು. ಆದರೆ ಈಗ ಕಣಿವೆ ರಾಜ್ಯದಲ್ಲಿ ಬೇರೆಯದ್ದೇ ರೀತಿಯಲ್ಲಿ ರಾಜಕೀಯ ದಾಳ ಉರುಳಿಸಲಾಗುತ್ತಿದ್ದು, ಕಾಂಗ್ರೆಸ್, ಪಿಡಿಪಿ, ನ್ಯಾಷನಲ್ ಕಾನ್ಫರೆನ್ಸ್ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದು 2002-2007 ಅವಧಿಯಲ್ಲಿ ನಡೆದಂತೆ ಎನ್ ಸಿ ಬೆಂಬಲಿತ ಪಿಡಿಪಿ-ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬರುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ. 
ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಅಗತ್ಯವಿರುವ ಮ್ಯಾಜಿಕ್ ನಂಬರ್ 44. ಪಿಡಿಪಿ ಬಳಿ 28 ಶಾಸಕರಿದ್ದರೆ ಎನ್ ಸಿ 15, ಕಾಂಗ್ರೆಸ್ 12 ಶಾಸಕರನ್ನು ಹೊಂದಿದ್ದು ಮೂರು ಪಕ್ಷಗಳು ಒಗ್ಗೂಡಿದರೆ ಸ್ಪಷ್ಟ ಬಹುಮತ ದೊರೆಯಲಿವೆ. ಸಮ್ಮಿಶ್ರ ಸರ್ಕಾರದ ಭಾಗವಾಗಿರುವುದಕ್ಕೆ ಎನ್ ಸಿ ಇಚ್ಛಿಸುತ್ತಿಲ್ಲವಾದರೂ ಪಿಡಿಪಿ-ಕಾಂಗ್ರೆಸ್ ಸರ್ಕಾರ ರಚನೆಗೆ ಮುಂದಾದರೆ ಬಾಹ್ಯ ಬೆಂಬಲ ನೀಡುವುದಾಗಿ ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ. ಒಂದು ವೇಳೆ ಈ ಪ್ರಯೋಗ ಯಶಸ್ವಿಯಾದರೆ ಪಿಡಿಪಿ ನೇತೃತ್ವದ ಸರ್ಕಾರವೇ ಅಸ್ಥಿತ್ವಕ್ಕೆ ಬರಲಿದೆಯಾದರೂ ಮೆಹಬೂಮಾ ಮುಫ್ತಿ ಮುಖ್ಯಮಂತ್ರಿಯಾಗುವ ಸಾಧ್ಯತೆಗಳೂ ಕಡಿಮೆ ಇವೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೇಂದ್ರ ಸಚಿವ, ಬಿಜೆಪಿ ನಾಯಕನಿಂದ ಸ್ಟಿಂಗ್ ಆಪರೇಷನ್‌ಗೆ ಸಂಚು: Congress ಶಾಸಕ ಗಣಿಗ ರವಿ ಸ್ಫೋಟಕ ಆರೋಪ; Video

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

ಬೇಕಾದರೆ ನನ್ನ ವಿರುದ್ಧವೂ ಫಾರ್ಮ್‌ - 7 ಸಲ್ಲಿಸಿ: ಕಾಂಗ್ರೆಸ್'ಗೆ BJP ಸಂಸದ ಯದುವೀರ್ ಒಡೆಯರ್ ಸವಾಲು