ರಾಜಸ್ಥಾನ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಸಿಎಂ ಯಾರಾಗಲಿದ್ದಾರೆ ಎಂಬ ಬಗ್ಗೆ ಕಾಂಗ್ರೆಸ್ ನ ಯುವ ನಾಯಕ ಸಚಿನ್ ಪೈಲಟ್ ಮೌನ ಮುರಿದಿದ್ದಾರೆ.
ರಾಜಸ್ಥಾನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿಎಂ ಯಾರಾಗಲಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿನ್ ಪೈಲಟ್ ಚುನಾವಣೆ ಫಲಿತಾಂಶವನ್ನು ಆಧರಿಸಿ ನಿರ್ಧಾರ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಸಿಎಂ ಆಗುತ್ತಿರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಸಚಿನ್ ಪೈಲಟ್, ಚುನಾವಣೆಯ ನಂತರ ಈ ಪ್ರಶ್ನೆ ಉದ್ಭವಿಸುತ್ತದೆ ಈಗ ಎಲ್ಲಾ ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಚುನಾವಣೆ ಎದುರಿಸುವುದರತ್ತ ಗಮನ ಕೇಂದ್ರೀಕರಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
ರಾಜಸ್ಥಾನದ ಟೋಂಕ್ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಸಚಿನ್ ಪೈಲಟ್, ಬಿಜೆಪಿ ಅಭ್ಯರ್ಥಿ ಯೂನಸ್ ಖಾನ್ ವಿರುದ್ಧ ಸ್ಪರ್ಧಿಸುತ್ತಿದ್ದಾರೆ.