ದೇಶ

ಜಮ್ಮು-ಕಾಶ್ಮೀರ: ಸೇನಾಶಿಬಿರದ ಮೇಲೆ ಉಗ್ರರ ದಾಳಿ, ಓರ್ವ ನಾಗರೀಕನಿಗೆ ಗಾಯ

Manjula VN
ಕುಲ್ಗಾಮ್: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಸೇನಾಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ನಾಗರೀಕನಿಗೆ ಗಂಭೀರ ಗಾಯವಾಗಿರುವ ಘಟನೆ ಗುರುವಾರ ನಡೆದಿದೆ. 
ಕುಲ್ಗಾಮ್ ಜಿಲ್ಲೆಯ ಖುದ್ವಾನಿ ಪ್ರದೇಶದಲ್ಲಿರುವ ಸೇನಾ ಶಿಬಿರದ ಬಳಿ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಉಗ್ರರ ವಿರುದ್ಧ ಸೇನಾಪಡೆಗಳು ಕಾರ್ಯಾಚರಣೆಗಿಳಿದಿವೆ. ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. 
ಇನ್ನು ದಾಳಿಯಲ್ಲಿ ಓರ್ವ ನಾಗರೀಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
SCROLL FOR NEXT