ಮಧ್ಯ ಪ್ರದೇಶ: ಬಸ್ ಮತ್ತು ಶಾಲಾ ವಾಹನದ ನಡುವೆ ಡಿಕ್ಕಿ; 7 ಶಾಲಾ ಮಕ್ಕಳು ಸೇರಿದಂತೆ 8 ಮಂದಿ ದುರ್ಮರಣ
ಶಾಲಾ ವಾಹನ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲಾ ಮಕ್ಕಳು, ಚಾಲಕ ಸೇರಿದಂತೆ ಒಟ್ಟು 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ....
ಭೂಪಾಲ್: ಶಾಲಾ ವಾಹನ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲಾ ಮಕ್ಕಳು, ಚಾಲಕ ಸೇರಿದಂತೆ ಒಟ್ಟು 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ.
ಬಿರ್ಸಿಗಾಪುರದಲ್ಲಿ ನಡೆದ ಅಪಘಾತದಲ್ಲಿ ಲಕ್ಕಿ ಎಂಬ ಖಾಸಗಿ ಶಾಲೆಯ 7 ವಿದ್ಯಾರ್ಥಿಗಳು ಹಾಗೂ ಚಾಲಕ ಮೃತ ಪಟ್ಟಿದ್ದಾರೆ. ಮೃತ ಮಕ್ಕಳೆಲ್ಲಾ ಶಾಲಾ ವಾಹನದಲ್ಲಿ ಪ್ರಯಾಣಿಸುತ್ತಿದ್ದರು.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಕ್ಕಳ ಸಾವಿಗೆ ಸಂತಾಪ ಸೂಚಿಸಿದ್ದಾರೆ, ಶಾಲಾ ಆಡಳಿತ ಮಂಡಳಿ ಶಾಲಾ ವ್ಯಾನ್ ಚಾಲಕರಿಗೆ ಅಗತ್ಯವಾದ ಮಾರ್ಗ ಸೂಚಿ ನೀಡಬೇಕೆಂದು ಟ್ವೀಟ್ ಮಾಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.