ರಾಮ್ ವಿಲಾಸ್ ಪಾಸ್ವನ್ 
ದೇಶ

2019 ಲೋಕಸಭಾ ಚುನಾವಣೆಯಲ್ಲಿ ಪಾಸ್ವಾನ್ ಸ್ಪರ್ಧಿಸಲ್ಲ, ಆದರೆ, ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆ?

ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಂತೆ 2019ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ರಾಮ್ ವಿಲಾಸ್ ಸ್ಪರ್ಧಿಸುವುದಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ನವದೆಹಲಿ: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಂತೆ 2019ರ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ರಾಮ್ ವಿಲಾಸ್  ಸ್ಪರ್ಧಿಸುವುದಿಲ್ಲ, ಆದರೆ, ಅವರನ್ನು ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಅಸ್ಸಾಂನಿಂದ ರಾಜ್ಯಸಭೆಗೆ  ಕಳುಹಿಸಲಾಗುತ್ತದೆ ಎಂಬುದು ಮೂಲಗಳಿಂದ ತಿಳಿದುಬಂದಿದೆ.

ಬಿಹಾರದಲ್ಲಿ ಜೆಡಿಯು ಹಾಗೂ ಬಿಜೆಪಿ ನಡುವಣ ಸುಗುಮ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಪಾಸ್ವನ್ ಅವರನ್ನು ಅಸ್ಸಾಂನಿಂದ ರಾಜ್ಯಸಭೆಗೆ ಆಯ್ಕೆಮಾಡಲು  ಪ್ರಧಾನಿ ನರೇಂದ್ರ ಮೋದಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಬಿಹಾರ ಪ್ಯಾಕೇಜ್ ಸಂಬಂಧ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆಗೆ ಮಾತುಕತೆ ವೇಳೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ , ಪಾಸ್ವಾನ್ ಅವರನ್ನು ರಾಜ್ಯಸಭೆಗೆ ಕಳುಹಿಸುವ  ಚಿಂತನೆ ವ್ಯಕ್ತಪಡಿಸಿದ್ದು, ಪ್ರಧಾನಿ ಮೋದಿ ಇದಕ್ಕೆ ಒಪ್ಪಿಗೆ ನೀಡಿದ್ದಾರೆ .

ಅಸ್ಸಾಂನಿಂದ ಪಾಸ್ವಾನ್ ಗೆಲುವು ಸಾಧಿಸಲು ಬಿಜೆಪಿ ಭರವಸೆ ನೀಡಿದರೆ, ಬಿಹಾರದಲ್ಲಿ ಬಿಜೆಪಿಯ ಇನ್ನೊಂದು ಸ್ಥಾನಕ್ಕೆ ಅವರು ಒಪ್ಪಿಗೆ ನೀಡಿದ್ದಾರೆ. ಬಿಹಾರದಲ್ಲಿ ಬಿಜೆಪಿ ಹಾಗೂ ಜೆಡಿಯು  ತಲಾ 18 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ನಾಲ್ಕನ್ನು ಎನ್ ಡಿಎ ಪಾಲುದಾರರಿಗೆ ಬಿಟ್ಟುಕೊಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ನಾವು ಯುದ್ಧದಲ್ಲಿದ್ದೇವೆ; ಟ್ರಂಪ್ ಮಾರ್ಮಿಕ ನುಡಿ, ಸಂಘರ್ಷ ಮತ್ತಷ್ಟು ಉದ್ನಿಗ್ನ ಸಾಧ್ಯತೆ

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು; 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

SCROLL FOR NEXT