ನವದೆಹಲಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚನೆ ಮಾಡುವಂತೆ ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳಿಗೆ ಪಾಕಿಸ್ತಾನದಿಂದ ನಿರ್ದೇಶನ ಬಂದಿದೆ ಎಂದು ಬಿಜೆಪಿ ಮುಖಂಡ ರಾಮ್ ಮಾಧವ್ ಗಂಭೀರ ಆರೋಪ ಮಾಡಿದ್ದಾರೆ.
ಗುರುವಾರ ಸುದ್ದಿ ಸಂಸ್ಥೆಯೊಂದಿಗೆ ಮಾಡಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಮ್ ಮಾಧವ್ ಅವರು, ಮೈತ್ರಿ ಸರ್ಕಾರ ರಚನೆ ಮಾಡುವಂತೆ ಪಾಕಿಸ್ತಾನದಿಂದ ನಿರ್ದೇಶನ ಬಂದಿದ್ದರಿಂದಲೇ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು ಕೈ ಜೋಡಿಸಿ ಸರ್ಕಾರ ರಚನೆಗೆ ಮುಂದಾಗಿದ್ದವು ಎಂದು ಹೇಳಿದ್ದಾರೆ. ಅಲ್ಲದೆ ಈ ಹಿಂದೆ ಇದೇ ಪಿಡಿಪಿ ಮತ್ತು ಎನ್ ಸಿ ಪಕ್ಷಗಳು ಪಾಕಿಸ್ತಾನದ ನಿರ್ದೇಶನದಂತೆಯೇ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬಹಿಷ್ಕರಿಸಿದ್ದವು ಎಂದು ಗಂಭೀರ ಆರೋಪ ಮಾಡಿದ್ದಾರೆ.
'ಈ ಹಿಂದೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಾಕ್ ನಿಂದ ಬಂದ ನಿರ್ದೇಶನದಂತೆಯೇ ಈಗಲೂ ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳಿಗೆ ನಿರ್ದೇಶನ ಬಂದಿರಬೇಕು. ಹೀಗಾಗಿ ಮೈತ್ರಿಗೆ ಮುಂದಾಗಿವೆ. ಆದರೆ ಈ ಬಗ್ಗೆ ರಾಜ್ಯಪಾಲರು ಕ್ರಮ ಕೈಗೊಳ್ಳುತ್ತಾರೆ ಎಂದು ರಾಮ್ ಮಾಧವ್ ಹೇಳಿದ್ದಾರೆ.
ಇನ್ನು ಕಾಶ್ಮೀರ ವಿಧಾನಸಭೆಯನ್ನು ವಿಸರ್ಜಿಸಿದ ರಾಜ್ಯಪಾಲ ನಿರ್ಧಾರಕ್ಕೆ ಅಚ್ಚರಿ ವ್ಯಕ್ತಪಿಡಿಸಿರುವ ಪಿಡಿಪಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಪಕ್ಷಗಳು, ನಿರ್ಧಾರದ ಹಿಂದೆ ಷಡ್ಯಂತ್ರವಡಗಿದ್ದು, ಉದ್ದೇಶ ಪೂರ್ವಕವಾಗಿಯೇ ರಾಜಭವನದ ಫ್ಯಾಕ್ಸ್ ಯಂತ್ರ ಕೆಲಸ ಮಾಡದಂತೆ ಮಾಡಿ ಮುಫ್ತಿ ಮೆಹಬೂಬಾ ಅವರ ಫ್ಯಾಕ್ಸ್ ರಾಜ್ಯಪಾಲರ ತಲುಪದಂತೆ ಮಾಡಲಾಗಿದೆ ಎಂದು ಆರೋಪ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics