ಬ್ರಾಹ್ಮಣರ ಭಾವನೆಗಳಿಗೆ ಧಕ್ಕೆ: ಟ್ವಿಟರ್ ಸಿಇಒ ವಿರುದ್ಧ ಮಾನನಷ್ಟ ಮೊಕದ್ದಮೆ!
ಭಾರತಕ್ಕೆ ಬಂದಿದ್ದ ಟ್ವಿಟರ್ ಸಿಇಒ ಜಾಕ್ ಡಾರ್ಸೆ ಅವರು ಬ್ರಾಹ್ಮಣ ವಿರೋಧಿ ಪೋಸ್ಟರ್ ಹಾಕಿದ್ದಕ್ಕೆ ದೇಶಾದ್ಯಂತ ಟೀಕೆ ವ್ಯಕ್ತವಾಗುತ್ತಿದ್ದು, ವಿಪ್ರ ಸಂಘಟನೆ ಟ್ವಿಟರ್ ಸಿಇಒ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಸಿದೆ.
ಜೈಪುರ: ಭಾರತಕ್ಕೆ ಬಂದಿದ್ದ ಟ್ವಿಟರ್ ಸಿಇಒ ಜಾಕ್ ಡಾರ್ಸೆ ಅವರು ಬ್ರಾಹ್ಮಣ ವಿರೋಧಿ ಪೋಸ್ಟರ್ ಹಾಕಿದ್ದಕ್ಕೆ ದೇಶಾದ್ಯಂತ ಟೀಕೆ ವ್ಯಕ್ತವಾಗುತ್ತಿದ್ದು, ವಿಪ್ರ ಸಂಘಟನೆ ಟ್ವಿಟರ್ ಸಿಇಒ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಚ್ಚರಿಸಿದೆ.
ಟ್ವಿಟರ್ ಸಿಇಒ ಜಾಕ್ ಡಾರ್ಸೆ ಅವರು ಬ್ರಾಹ್ಮಣರ ಭಾವನೆಗಳಿಗೆ ಧಕ್ಕೆ ಉಂಟುಮಾಡಿದ್ದಾರೆ ಎಂದು ಅಡ್ವೊಕೇಟ್ ಹಸ್ತಿಮಲ್ ಸಾರಸ್ವತ್ ಆರೋಪಿಸಿದ್ದು, ರಾಜಸ್ಥಾನದ ಹೈಕೋರ್ಟ್ ನಲ್ಲಿ ಟ್ವಿಟರ್ ಸಿಇಒ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಹೇಳಿದ್ದಾರೆ.
ಬ್ರಾಹ್ಮಣ ಸಮುದಾಯದ ಆಧಿಪತ್ಯವನ್ನು ಅಂತ್ಯಗೊಳಿಸುವುದಕ್ಕೆ ಕರೆ ನೀಡಿದ್ದ ಪೋಸ್ಟರ್ ನ್ನು ಹಿಡಿದು ಪೋಟೋಗೆ ಪೋಸ್ ನೀಡಿದ್ದಕ್ಕಾಗಿ ಟ್ವಿಟರ್ ಸಿಇಒ ವಿರುದ್ಧ ಟೀಕೆಗಳು ವ್ಯಕ್ತವಾಗಿತ್ತು. ಈ ಬೆನ್ನಲ್ಲೆ ಟ್ವಿಟರ್ ಕ್ಷಮೆಯನ್ನೂ ಯಾಚಿಸಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.