ಉತ್ತರ ಪ್ರದೇಶದ ರಾಂಪುರದಲ್ಲಿ ಹಳಿ ತಪ್ಪಿದ ರೈಲಿನ ಆರು ಬೋಗಿಗಳು: ಸಂಚಾರದಲ್ಲಿ ವ್ಯತ್ಯಯ
ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ಮೊರದಾಬಾದ್-ಬರೇಲಿ ಜಂಕ್ಷನ್ ನ ದಮೊರ ಮತ್ತು ದುಗ್ಗನ್ ...
ರಾಂಪುರ: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ ಮೊರದಾಬಾದ್-ಬರೇಲಿ ಜಂಕ್ಷನ್ ನ ದಮೊರ ಮತ್ತು ದುಗ್ಗನ್ ನಿಲ್ದಾಣದ ಮಧ್ಯೆ ರೈಲಿನ ಆರು ಹಳಿಗಳು ಹಳಿ ತಪ್ಪಿದ ಘಟನೆ ಕಳೆದ ರಾತ್ರಿ ನಡೆದಿದೆ.
ಈ ಘಟನೆಯಿಂದಾಗಿ ಈ ಮಾರ್ಗದಲ್ಲಿ ರೈಲು ಸಂಚಾರ ಅಸ್ತವ್ಯಸ್ತವಾಗಿದೆ. ರೈಲು ಹಳಿ ತಪ್ಪಿದ್ದರಿಂದ ಕನಿಷ್ಠ 17 ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಿದೆ.
ಬೋಗಿ ಹಳಿ ತಪ್ಪಿದ್ದರಿಂದ ಯಾವುದೇ ಹಾನಿಯುಂಟಾಗಿಲ್ಲ. ಇದೀಗ ಮೊರದಾಬಾದ್ ಚಂದೌಸಿ-ಬರೇಲಿ ಮಾರ್ಗವಾಗಿ ರೈಲು ಸಂಚರಿಸುತ್ತಿವೆ.
ಪ್ರಯಾಣಿಕರಿಗೆ ಬದಲಿ ಮಾರ್ಗದ ಬಗ್ಗೆ ಮಾಹಿತಿ ಮತ್ತು ಸಹಾಯಕ್ಕೆ ತುರ್ತು ಸಹಾಯವಾಣಿಯನ್ನು ನೀಡಲಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.