ಸಾಂದರ್ಭಿಕ ಚಿತ್ರ 
ದೇಶ

ಮಿಜೋರಾಂ ವಿಧಾನಸಭೆ ಕಣದಲ್ಲಿ ಶೇ.4 ರಷ್ಟು ಕ್ರಿಮಿನಲ್ ಅಭ್ಯರ್ಥಿಗಳು: 116 ಕೋಟ್ಯಾಧಿಪತಿಗಳು!

ನವೆಂಬರ್ 28 ರಂದು ಮಿಜೋರಾಂ ವಿಧಾನ ಸಭೆಗೆ ಚುನಾವಣೆ ನಡೆಯಲಿದ್ದು, 209 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಿದ್ದಾರೆ. ..

ನವದೆಹಲಿ: ನವೆಂಬರ್ 28 ರಂದು ಮಿಜೋರಾಂ ವಿಧಾನ ಸಭೆಗೆ ಚುನಾವಣೆ ನಡೆಯಲಿದ್ದು, 209 ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಿದ್ದಾರೆ. 
ಒಟ್ಟು  209 ಅಭ್ಯರ್ಥಿಗಳ ಪೈಕಿ ಕೇವಲ ಶೇ.4 ಮಂದಿಯ ವಿರುದ್ದ ಮಾತ್ರವೇ ಕ್ರಿಮಿನಲ್‌ ಕೇಸುಗಳಿವೆ; ಜೊತೆಗೆ 116 ಮಂದಿ ಅಭ್ಯರ್ಥಿಗಳು ಕೋಟ್ಯಾಧಿಪತಿಗಳಾಗಿದ್ದಾರೆ. 
ಒಟ್ಟು 9 ಅಭ್ಯರ್ಥಿಗಳ ಪೈಕಿ ಕೇವಲ ನಾಲ್ಕು ಮಂದಿ (ಶೇ.2) ತಮ್ಮ ವಿರುದ್ಧ ಗಂಭೀರ ಕ್ರಿಮಿನಲ್‌ ಕೇಸುಗಳಿವೆ ಎಂದು ಘೋಷಿಸಿಕೋಂಡಿದ್ದಾರೆ.
ಕ್ರಿಮಿನಲ್‌ ಕೇಸುಗಳಿರುವ ಅಭ್ಯರ್ಥಿಗಳ ಪಕ್ಷವಾರು ಹಂಚಿಕೆಯ ಪ್ರಕಾರ ಬಿಜೆಪಿಯ ಇಬ್ಬರು, ಕಾಂಗ್ರೆಸ್‌ ಮತ್ತು ಮಿಜೋ ನ್ಯಾಶನಲ್‌ ಫ್ರಂಟ್‌ನ ತಲಾ ಮೂವರು, ಮತ್ತು ಒಬ್ಬ ಪಕ್ಷೇತರ ಅಭ್ಯರ್ಥಿ ಕ್ರಿಮಿನಲ್‌ ಕೇಸು ಹೊಂದಿದವರಾಗಿದ್ದಾರೆ ಎಂದು ಪ್ರಜಾಸತ್ತೆ ಸುಧಾರಣಾ ಸಂಘ (ಎಡಿಆರ್‌)ದ ಪತ್ರಿಕಾ ಪ್ರಕಟಣೆ ತಿಳಿಸಿದೆ. 
2013ರ ಚುನಾವಣೆಗೆ ಹೋಲಿಸಿದರೆ ಈ ಬಾರಿಯ ಮಿಜೋರಾಂ ವಿಧಾನ ಸಭಾ ಚುನಾವಣಾ ಕಣದಲ್ಲಿ ಕ್ರಿಮಿನಲ್‌ ಕೇಸು ಹೊಂದಿರುವ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಿದೆ. ಕಳೆದ ಬಾರಿ ಕೇವಲ ಶೇ.2 ಇದ್ದದ್ದು ಈ ಬಾರಿ ಶೇ.4ಕ್ಕೇರಿದೆ. ಹಾಗಿದ್ದರೂ ರಾಷ್ಟ್ರ ಮಟ್ಟದಲ್ಲಿ ನೋಡಿದಾಗ ಇದು ಅತ್ಯಂಕ ಕನಿಷ್ಠ ವಾಗಿದೆ. 
ಮಿಜೋರಾಂ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳ ಸರಾಸರಿ ಆಸ್ತಿಪಾಸ್ತಿ 3.11 ಕೋಟಿ ರೂ. ಇದೆ. 2013ರಲ್ಲಿ 2.31 ಕೋಟಿ ರೂ. ಸರಾಸರಿ ಇತ್ತು. 
ಮಿಜೋರಾಂ ನ 40 ವಿಧಾನಸಭೆ ಕ್ಷೇತ್ರಗಳಿಗೆ 209 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಡಿಸೆಂಬರ್ 11 ರಂದು ಫಲಿತಾಂಶ ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT