ಸಂಗ್ರಹ ಚಿತ್ರ 
ದೇಶ

ಭಾರತೀಯ ಸೇನೆಯ ಭರ್ಜರಿ ಕಾರ್ಯಾಚರಣೆ: ಅನಂತ್ ನಾಗ್ ನಲ್ಲಿ 6 ಉಗ್ರರ ಹತ್ಯೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಏಕಕಾಲದಲ್ಲಿ ಬರೊಬ್ಬರಿ 6 ಉಗ್ರರನ್ನು ಎನ್ ಕೌಂಟರ್ ನಲ್ಲಿ ಕೊಂದು ಹಾಕಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಏಕಕಾಲದಲ್ಲಿ ಬರೊಬ್ಬರಿ 6 ಉಗ್ರರನ್ನು ಎನ್ ಕೌಂಟರ್ ನಲ್ಲಿ ಕೊಂದು ಹಾಕಿದೆ.
ಅನಂತ್ ನಾಗ್ ಜಿಲ್ಲೆಯಲ್ಲಿ ಈ ಎನ್ ಕೌಂಟರ್ ನಡೆದಿದ್ದು, ಜಿಲ್ಲೆಯ ಬಿಜ್ ಬೆಹರಾ ಪ್ರಾಂತ್ಯದ ಸೆಕಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಖಚಿತ ಮಾಹಿತಿ ಪಡೆದ ಸೇನೆ ದಿಢೀರ್ ದಾಳಿ ನಡೆಸಿದೆ. ಈ ವೇಳೆ ಕನಿಷ್ಠ  ಉಗ್ರರು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಉಗ್ರರು ಕೂಡ ಪ್ರತಿ ದಾಳಿ ನಡೆಸಿದ್ದು, ಸೇನಾಪಡೆಯಲ್ಲಿನ ಸಾವು-ನೋವುಗಳ ಕುರಿತು ಮಾಹಿತಿ ಲಭ್ಯವಾಗಿಲ್ಲ.
ಆದರೆ ಘಟನಾ ಸ್ಥಳದಲ್ಲಿ ಮತ್ತಷ್ಟು ಉಗ್ರರಿರುವ ಶಂಕೆ ಇದ್ದು, ಎನ್ ಕೌಂಟರ್ ಮುಂದುವರೆದಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಪ್ರಸ್ತುತ ಎನ್ ಕೌಂಟರ್ ಈ ವರ್ಷದ ಅತೀ ದೊಡ್ಡ ಎನ್ ಕೌಂಟರ್ ಎಂದು ಹೇಳಲಾಗುತ್ತಿದ್ದು, ಏಕಕಾಲದಲ್ಲೇ ಇಷ್ಟು ಪ್ರಮಾಣದ ಉಗ್ರರು ಹತರಾಗಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ.
ಇನ್ನು ಕಳೆದ ಮಂಗಳವಾರ ಇದೇ ಕಾಶ್ಮೀರದಲ್ಲಿ ಅಪರಿಚಿತ ಶಸ್ತ್ರಧಾರಿಗಳು ಹುರಿಯತ್ ನಾಯಕ ಹಝಿಫುಲ್ಲಾ ಮಿರ್ ಅವರನ್ನು ಗುಂಡಿಟ್ಟು ಕೊಂದು ಹಾಕಿದ್ದರು. ಇದು ದುಷ್ಕರ್ಮಿಗಳ ಕೃತ್ಯವೋ ಅಥವಾ ಉಗ್ರರ ದಾಳಿಯೋ ಇನ್ನೂ ತಿಳಿದಿಲ್ಲ. ಈ ಬಗ್ಗೆ ಪೊಲೀಸ್ ತನಿಖೆ ಪ್ರಗತಿಯಲ್ಲಿದೆ. 
ಇದರ ಬೆನ್ನಲ್ಲೇ ಸೇನೆ ಅನಂತ್ ನಾಗ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾರಚರಣೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!