ಕೆ ಚಂದ್ರಶೇಖರ್ ರಾವ್ 
ದೇಶ

ಪ್ರಧಾನಿ ಮೋದಿಗೆ ಹಿಂದೂ - ಮುಸ್ಲಿಮರನ್ನು ಒಡೆಯುವ ಕಾಯಿಲೆ ಇದೆ: ಕೆಸಿಆರ್

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ 'ಹಿಂದೂ - ಮುಸ್ಲಿಮರನ್ನು ಒಡೆಯುವ ಕಾಯಿಲೆ ಇದೆ ಎಂದು ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ...

ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ 'ಹಿಂದೂ - ಮುಸ್ಲಿಮರನ್ನು ಒಡೆಯುವ ಕಾಯಿಲೆ ಇದೆ ಎಂದು ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಶುಕ್ರವಾರ ಆರೋಪಿಸಿದ್ದಾರೆ.
ಇಂದು ನರ್ಸಂಪೇಟ್ ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಟಿಆರ್ ಎಸ್ ಮುಖ್ಯಸ್ಥ, ಪ್ರಧಾನಿಗೆ ಎಲ್ಲರನ್ನೂ ಸಮಾನವಾಗಿ ನೋಡಿಕೊಳ್ಳುವ ಹೃದಯವಿಲ್ಲ. ಮೋದಿಗೆ ಮತ್ತು ಬಿಜೆಪಿಗೆ 'ಕೋಮುವಾದಿ ಹುಚ್ಚು' ಹಿಡಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರಿ ನೌಕರಿಯಲ್ಲಿರುವ ಮುಸ್ಲಿಮರ ಮೀಸಲಾತಿಯನ್ನು ಶೇ.4ರಿಂದ ಶೇ.12ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ.6ರಿಂದ 10ಕ್ಕೆ ಏರಿಸಬೇಕು ಎಂದು ನಿರ್ಣಯ ಕೈಗೊಂಡಿದ್ದರೂ ಕೇಂದ್ರ ಸರ್ಕಾರ ಅದನ್ನು ತಡೆ ಹಿಡಿದಿದೆ ಎಂದು ಕೆಸಿಆರ್ ಆರೋಪಿಸಿದರು.
ಮೋದಿ ಮತ್ತು ಬಿಜೆಪಿ ಒಂದು ಕಾಯಿಲೆ ಇದೆ. ಪ್ರತಿಯೊಂದು ವಿಚಾರದಲ್ಲಿ ಹಿಂದೂ-ಮುಸ್ಲಿಮರನ್ನು ವಿಭಜನೆ ಮಾಡಲು ನೋಡುತ್ತಾರೆ. ಇದರ ಹೊರತು ಅವರಿಗೆ ಬೇರೆ ಏನೂ ಗೊತ್ತಿಲ್ಲ ಎಂದರು.
ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 17 ಲೋಕಸಭಾ ಕ್ಷೇತ್ರದಲ್ಲಿ ಜನ ಟಿಆರ್ ಎಸ್ ಅನ್ನು ಗೆಲ್ಲಿಸಿದರೆ ಮೀಸಲಾತಿಯನ್ನು ಹೆಚ್ಚಿಸುವಂತೆ ನೋಡಿಕೊಳ್ಳಲಾಗುವುದು ಎಂದು ಚಂದ್ರಶೇಖರ್ ರಾವ್ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್​​ನಿಂದ ಮಹತ್ವದ ಆದೇಶ

Bihar horror: ಅಪ್ರಾಪ್ತ ಜೋಡಿ ಅಡ್ಡಗಟ್ಟಿ ಲೈಂಗಿಕ ಕಿರುಕುಳ; ಆಂಧಭಕ್ತರೇ ಹೊಣೆ - ರಾಹುಲ್ ಗಾಂಧಿ

ನಂದಿಗ್ರಾಮ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಗೆ ಅ. 5ರವರೆಗೆ ನ್ಯಾಯಾಂಗ ಬಂಧನ!

Jamui harassment: ಮೂವರ ಬಂಧನ, 7 ಮಂದಿ ಗುರುತು ಪತ್ತೆ.. ಲೈಂಗಿಕ ಕಿರುಕುಳ ನೀಡಿದ ಆರೋಪಿಗಳಿಗೆ ಪೊಲೀಸ್ ಶೋಧ!

Human Vs Terminator: 6 ಅಡಿ ರೋಬೋಟ್ ಜೊತೆ ಇನ್‌ಫ್ಲುಯೆನ್ಸರ್ ಫೈಟ್, ಗೆದ್ದಿದ್ಯಾರು? Video ವೈರಲ್