ಮುಂಬೈ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಬೇಕು ಮತ್ತು ಮಂದಿರ ನಿರ್ಮಾಣದ ದಿನಾಂಕವನ್ನು ಪ್ರಕಟಿಸಬೇಕು ಎಂದು ಶಿವಸೇನೆ ಶುಕ್ರವಾರ ಬಿಜೆಪಿಗೆ ಒತ್ತಾಯಿಸಿದೆ.
ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶಿವಸೇನೆ, ಅಯೋಧ್ಯೆಯಲ್ಲಿ ಬಾಬರನ ರಾಜ್ಯವನ್ನು ನಾಶ ಮಾಡುವಲ್ಲಿ ಶಿವಸೇನಿಕರ ಪಾತ್ರ ದೊಡ್ಡದು. ಹೀಗಾಗಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ಬಿಜೆಪಿ ಮೀನಾಮೇಷ ಎಣಿಸುತ್ತಿದೆ ಎಂದು ಆರೋಪಿಸಿದೆ.
ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣ ಮಾಡುವ ನಿಮ್ಮ ಕಳಕಳ ನಿಜವೇ ಆಗಿದ್ದರೆ ಅದನ್ನು ಕೂಡಲೇ ಕಾರ್ಯಗತಗೊಳಿಸಿ ಮತ್ತು ಶೀಘ್ರವೇ ದಿನಾಂಕ ನಿಗದಿಪಡಿಸಿ. ಇಲ್ಲವೇ ಪರಿಣಾಮ ಎದುರಿಸಿ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಎಚ್ಚರಿಸಿದೆ.
ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ನವೆಂಬರ್ 25ರಂದು ಅಯೋಧ್ಯೆಗೆ ಭೇಟಿ ನೀಡುತ್ತಿದ್ದು, ಈ ಹಿನ್ನಲೆಯಲ್ಲಿ ರಾಮ ಮಂದಿರ ನಿರ್ಮಾಣ ದಿನಾಂಕ ಪ್ರಟಿಸುವಂತೆ ಆಗ್ರಹಿಸಿದೆ.