ನವದೆಹಲಿ: ರಾಮ ಮಂದಿ ನಿರ್ಮಾಣ ಆಗಲೇ ಬೇಕು ಆದರೆ ಸುಗ್ರೀವಾಜ್ಞೆಗೆ ಅವಕಾಶವಿಲ್ಲ ಎಂದು ಹರ್ಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿಷಯವಾಗಿ ಒಮ್ಮತ ಮೂಡಿಸುವುದಕ್ಕೆ ಪ್ರಯತ್ನ ಮಾಡಲಾಗುತ್ತಿದೆ, ಆದರೆ ಸುಗ್ರೀವಾಜ್ಞೆಗೆ ಅವಕಾಶ ಇಲ್ಲ ಎಂದಿದ್ದಾರೆ.
ಇದೇ ವೇಳೆ ಕುರುಕ್ಷೇತ್ರದಲ್ಲಿ ನಡೆಯಲಿರುವ ಗೀತಾ ಜ್ಯೂಬಿಲಿ ಉತ್ಸವದ ಬಗ್ಗೆ ಮಾತನಾಡಿರುವ ಮನೋಹರ್ ಲಾಲ್ ಖಟ್ಟರ್, ಡಿ.13 ರಿಂದ 18 ವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪ್ರಣಬ್ ಮುಖರ್ಜಿ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಕುರುಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ಸಹಯೋಗದಲ್ಲಿ ಪ್ರತಿ ವರ್ಷ ಹರ್ಯಾಣದಲ್ಲಿ ಅಂತಾರಾಷ್ಟ್ರೀಯ ಗೀತಾ ಮಹೋತ್ಸವನ್ನು ಆಚರಿಸಲಾಗುತ್ತದೆ.