ಟೊಂಕ್: ಬಿಜೆಪಿಗೆ ಭಾರತ ಮಾತೆ ತಾಯಿ ಆಗಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಸೋನಿಯಾ ಗಾಂಧಿ ಅವರೇ ತಾಯಿ ಎಂದು ಹೇಳಿಕೆ ನೀಡಿರುವ ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ ವಿರುದ್ಧ ರಾಜಸ್ತಾನ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲಟ್ ಕಿಡಿಕಾರಿದ್ದಾರೆ.
ಇಂತಹ ಹೇಳಿಕೆಗಳು ಆಡಳಿತಾರೂಢ ಪಕ್ಷಕ್ಕೆ ಶೋಭೆ ತರುವಂತಹದ್ದಲ್ಲ, ವಸುಂಧರಾ ರಾಜೆ ಅವರಿಗೆ ಪ್ರತಿಪಕ್ಷಗಳ ವಿರುದ್ಧ ಮಾತನಾಡುವ ನೈತಿಕ ಹಕ್ಕಿಲ್ಲ, ಇದು ಹೊಣೆಗಾರಿಕೆಯ ದಿನವಾಗಿದೆ ಎಂದು ಸಚಿನ್ ಪೈಲಟ್ ಹೇಳಿದ್ದಾರೆ.
ಬಿಜೆಪಿ ಪಕ್ಷದ ನಾಯಕರು ಭಾರತ ಮಾತೆಯನ್ನು ತಾಯಿಯಂತೆ ಪೂಜಿಸುತ್ತಾರೆ. ಆದರೆ, ಕಾಂಗ್ರೆಸ್ ಪಕ್ಷದ ನಾಯಕರಿಗೆ ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಅವರೇ ತಾಯಿ ಆಗಿದ್ದಾರೆ , ಬೇರೆ ಯಾರೂ ಇಲ್ಲ ಎಂದು ವಸುಂಧರಾ ರಾಜೆ ನಿನ್ನೆ ಚುನಾವಣಾ ಪ್ರಚಾರ ಸಭೆಯಲ್ಲಿ ಸೋನಿಯಾಗಾಂಧಿ ವಾಗ್ದಾಳಿ ನಡೆಸಿದ್ದರು.