ಹಿಂದೂಗಳ ಭಾವನೆಗಳೊಂದಿಗೆ ಆಟವಾಡಬೇಡಿ: ಬಿಜೆಪಿಗೆ ಉದ್ಧವ್ ಠಾಕ್ರೆ
ಹಿಂದೂಗಳ ಭಾವನೆಗಳೊಂದಿಗೆ ಆಟವಾಡಬೇಡಿ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ಭಾನುವಾರ ಹೇಳಿದ್ದಾರೆ...
ಅಯೋಧ್ಯೆ: ಹಿಂದೂಗಳ ಭಾವನೆಗಳೊಂದಿಗೆ ಆಟವಾಡಬೇಡಿ ಎಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ಭಾನುವಾರ ಹೇಳಿದ್ದಾರೆ.
ರಾಮ ಮಂದಿರಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ವಿವಾದ ಸುಪ್ರೀಂಕೋರ್ಟ್ ನಲ್ಲಿಯೇ ಇತ್ಯರ್ಥಗೊಳ್ಳಲಿದೆ ಎಂಬುದೇ ಆದರೆ, ಅಯೋಧ್ಯೆ ವಿಚಾರ ಚುನಾವಣಾ ವಿಚಾರವಾಗಬಾರದು. ಬಿಜೆಪಿ ಹಿಂದೂಗಳ ಭಾವನೆಗಳೊಂದಿಗೆ ಆಟವಾಡಬಾರದು ಎಂದು ಹೇಳಿದ್ದಾರೆ.
ರಾಮ ಮಂದಿರ ವಿಚಾರ ಚುನಾವಣೆಯ ಗಿಮಿಕ್ ಆಗಿದೆಯೇ ಎಂಬುದರ ಕುರಿತಂತೆ ಬಿಜೆಪಿ ಜನರಿಗೆ ಸ್ಪಷ್ಟಪಡಿಸಬೇಕು ಎಂದು ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ನಡೆಯುತ್ತಿರುವ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಉದ್ಧವ್ ಠಾಕ್ರೆಯವರು ಇದೇ ಮೊದಲ ಬಾರಿಗೆ ಅಯೋಧ್ಯೆಗೆ ಆಗಮಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.