ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ 
ದೇಶ

ಹಿಮಾಚಲ ಪ್ರದೇಶದಲ್ಲಿ ಭೀಕರ ಬಸ್ ಅಪಘಾತ: 9 ಸಾವು, 25 ಮಂದಿಗೆ ಗಾಯ

ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ಒಂದು ಸೇತುವೆಯಿಂದ ನದಿಗೆ ಉರುಳಿದ ಪರಿಣಾಮ ಕನಿಷ್ಟ ಒಂಬತ್ತು ಮಂದಿ ಸಾವನ್ನಪ್ಪಿ 25 ಜನ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಸಿಮೌರ್ ಜಿಲ್ಲೆಯಲ್ಲಿ ನಡೆದಿದೆ.

ನಹಾನ್ (ಹಿಮಾಚಲ ಪ್ರದೇಶ): ಅತಿ ವೇಗವಾಗಿ ಚಲಿಸುತ್ತಿದ್ದ ಬಸ್ ಒಂದು ಸೇತುವೆಯಿಂದ ನದಿಗೆ ಉರುಳಿದ ಪರಿಣಾಮ ಕನಿಷ್ಟ ಒಂಬತ್ತು ಮಂದಿ ಸಾವನ್ನಪ್ಪಿ 25 ಜನ ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದ ಸಿಮೌರ್ ಜಿಲ್ಲೆಯಲ್ಲಿ ನಡೆದಿದೆ.

ಶಿಮ್ಲಾದಿಂದ ದಕ್ಷಿಣಕ್ಕೆ 168 ಕಿ.ಮೀ. ದೂರದಲ್ಲಿ ಈ ಅವಘಡ ಸಂಭವಿಸಿದ್ದು ರೇಣುಕಾ-ದದಾಹು-ನಹಾನ್ ರಸ್ತೆಯ ಖಾದ್ರಿ ಗ್ರಾಮದ ಸಮೀಪ ಸಂಜೆ 4.30 ಗಂಟೆಗೆ ಬಸ್ ನದಿಗೆ ಉರುಳಿದೆ.

ರೇಣುಕಾಜಿ ನಿಂದ ನಹಾನ್ ಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯ್ಯಂತ್ರಣ ತಪ್ಪಿ ಜಲಾಲ್ ಸೇತುವೆಯಿಂದ 40 ಅಡಿ ಆಳದ ನದಿಗೆ ಬಿದ್ದಿದೆ ಎಂದು  ಹೆಚ್ಚುವರಿ ಅಧೀಕ್ಷಕ ವೀರೇಂದ್ರ ಸಿಂಗ್ ಠಾಕೂರ್ ತಿಳಿಸಿದ್ದಾರೆ.

ಘಟನೆಯಲ್ಲಿ ಮೂರು ಮಹಿಳೆಯರು ಸೇರಿದಂತೆ ನಾಲ್ಕು ಪ್ರಯಾಣಿಕರು ಸ್ಥಳದಲ್ಲೇ ನಿಧನರಾದರೆ ಇನ್ನೂ ಐವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಪೋಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎಂದು ಹೇಳಿದ್ದಾರೆ. ಸತ್ತವರ ಗುರುತು ಪತ್ತೆ ಕಾರ್ಯ ಪ್ರಗತಿಯಲ್ಲಿದ್ದು ಹೆಚ್ಚಿನವರು ಸ್ಥಳೀಯ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ