ಇಂದೋರ್: ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣ ಆಗಬೇಕೆಎಂದು ಬಿಜೆಪಿ ಬಯಸುತ್ತದೆ, ಹೀಗೆ ಮಂದಿರ ನಿರ್ಮಾಣ ಆಗಿಯೇ ಆಗುವುದೆನ್ನುವುದು ಪಕ್ಷದ ನಂಬಿಕೆಯಾಗಿದೆ ಎಂದು ಕಮಲ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದವು ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಇದ್ದು ನ್ಯಾಯಾಲಯ ಏನು ತೀರ್ಪು ನೀಡಲಿದೆ ಎನ್ನುವುದನ್ನು ಕಾದು ನೋಡಬೇಕಿದೆ ಎಂದರು.
ನವೆಂಬರ್ 28ರಂದು ನಡೆಯುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗಾಗಿ ಕಡೆ ದಿನದ ಪ್ರಚಾರ ರ್ಯಾಲಿಯಲ್ಲಿ ಭಾಗವಹಿಸಿದ್ದ ಶಾ "ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗನ್ಬೇಕೆಂದು ಭಾರತೀಯರೆಲ್ಲರ ಬಯಕೆಯಾಗಿದೆ, ಮಂದಿರ ನಿರ್ಮಾಣ ಶೀಘ್ರವಾಗಿ ಆಗಲಿದೆ ಎನ್ನುವುದು ನಮ್ಮ ನಂಬಿಕೆಯೂ ಆಗಿದೆ" ಎಂದು ಹೇಳಿದ್ದಾರೆ.
ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಕಾಂಗ್ರೆಸ್ ತಕರಾರು ಎತ್ತುತ್ತಿದೆ ಎಂದ ಶಾ ಸುಪ್ರೀಂ ಕೋರ್ಟ್ ರಾಮ ಮಂದಿರ ವಿವಾದದ ಸಂಬಂಧ ವಿಚಾರಣೆಯನ್ನು ಜನವರಿಗೆ ಮುಂದೂಡಿದ್ದು ಅಲ್ಲೇನು ಆಗಲಿದೆ ಎನ್ನುವುದನ್ನು ನೋಡಬೇಕಿದೆ ಎಂದಿದ್ದಾರೆ.
ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದ ವಿಚಾರಣೆಯ ದಿನಾಂಕವನ್ನು ಜನವರಿಯ ಮೊದಲ ವಾರಕ್ಕೆ ಮುಂದೂಡಿ ಸುಪ್ರೀಂ ಕೋರ್ಟ್ ಕಳೆದ ತಿಂಗಳು ಆದೇಶ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics