ಪಾಕಿಸ್ತಾನ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಪಂಜಾಬ್ ಸಿಎಂ 
ದೇಶ

ಪಾಕಿಸ್ತಾನ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಪಂಜಾಬ್ ಸಿಎಂ

ಪಾಕಿಸ್ತಾನ ಕದನವಿರಾಮ ಉಲ್ಲಂಘನೆ ಮಾಡುತ್ತಿರುವುದರ ಕುರಿತು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಪಾಕ್ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ

ಗುರ್ದಾಸ್ ಪುರ: ಪಾಕಿಸ್ತಾನ ಕದನವಿರಾಮ ಉಲ್ಲಂಘನೆ ಮಾಡುತ್ತಿರುವುದರ ಕುರಿತು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಪಾಕ್ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ. 
ಕರ್ತಾರ್ ಪುರ ಕಾರಿಡಾರ್ ಗೆ ಶಿಲನ್ಯಾಸ  ನೆರವೇರಿಸಿದ ನಂತರ ಪಾಕ್ ನ ಸೇನಾ ಮುಖ್ಯಸ್ಥರನ್ನು ಪ್ರಶ್ನಿಸಿರುವ ಅಮರಿಂದರ್ ಸಿಂಗ್ "ನಿಮಗೆ ನಾನು ಎಚ್ಚರಿಕೆ ನೀಡುತ್ತಿದ್ದೆನೆ, ನಾವೂ ಕೂಡಾ ಪಂಜಾಬಿಗಳೇ, ನೀವು ಭಾರತವನ್ನು ಪ್ರವೇಶಿಸುವುದಕ್ಕಾಗಲೀ ಇಲ್ಲಿನ ವಾತಾವರಣ ಹದಗೆಡಿಸುವುದಕ್ಕಾಗಿ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. 
ಕದನ ವಿರಾಮ ಉಲ್ಲಂಘನೆ ಹೇಡಿಗಳ ಲಕ್ಷಣ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಾಕ್ ಸೇನಾ ಮುಖ್ಯಸ್ಥರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಕದನ ವಿರಾಮ ಉಲ್ಲಂಘನೆ ಮಾಡಿ ಎದುರಾಳಿ ಸೈನಿಕರನ್ನು ಹತ್ಯೆ ಮಾಡಲು ಯಾವ ಸೇನೆ ಹೇಳಿಕೊಡುತ್ತದೆ? ಪಠಾಣ್ ಕೋಟ್ ಹಾಗೂ ಅಮೃತ್ ಸರಕ್ಕೆ ದಾಳಿ ನಡೆಸಲು ಜನರನ್ನು ಕಳಿಸುವುದನ್ನು ಯಾವ ಸೇನೆ ಹೇಳಿಕೊಡುತ್ತದೆ ಎಂದು ಪ್ರಶ್ನಿಸಿದ್ದಾರೆ.
ಕರ್ತಾರ್ ಪುರ ಕಾರಿಡಾರ್ ಗೆ ಪಾಕಿಸ್ತಾನದಲ್ಲಿ ನ.28 ರಂದು ಶಿಲನ್ಯಾಸ ನೆರವೇರಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಪಾಕ್ ಸರ್ಕಾರ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಅವರನ್ನೂ ಆಹ್ವಾನಿಸಿತ್ತು. ಆದರೆ ಪಾಕಿಸ್ತಾನದಿಂದ ನಿರಂತರವಾಗಿ ಕದನ ವಿರಾಮ ಉಲ್ಲಂಘನೆಯ ಕಾರಣ ನೀಡಿದ್ದ ಅಮರಿಂದರ್ ಸಿಂಗ್ ಪಾಕ್ ಆಹ್ವಾನವನ್ನು ನಿರಾಕರಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT