ಅಜ್ಮೀರ್ ದರ್ಗಾಕ್ಕೆ ತೆರಳಿ ಚಾದರ್ ಸಮರ್ಪಿಸಿದ ರಾಹುಲ್ ಗಾಂಧಿ
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು 13 ನೇ ಶತಮಾನದ ಸೂಫಿ ಸಂತ ಖ್ವಾಜಾ ಮೊಹಿನ್ನುದ್ದಿನ್ ಚಿಷ್ಠಿ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಅಜ್ಮೀರ್ :ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಇಂದು 13 ನೇ ಶತಮಾನದ ಸೂಫಿ ಸಂತ ಖ್ವಾಜಾ ಮೊಹಿನ್ನುದ್ದಿನ್ ಚಿಷ್ಠಿ ದರ್ಗಾಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ರಾಜಸ್ತಾನ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲಟ್ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ತೆರಳಿದ ರಾಹುಲ್ ಗಾಂಧಿ ದರ್ಗಾಕ್ಕೆ ಚಾದರ್ ಸಮರ್ಪಿಸುವ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನಂತರ ರಾಹುಲ್ ಗಾಂಧಿ ಪುಷ್ಕರ್ ಗೆ ತೆರಳಲಿದ್ದು, ಅಲ್ಲೂ ಕೂಡಾ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಜೈಸ್ಮಲ್ಮಾರ್ ಜಿಲ್ಲೆಯ ಪೋಕ್ರಾನ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.