ಮುಜಾಫರ್ ನಗರ: ಉತ್ತರ ಪ್ರದೇಶದ ಮುಜಾಫರ್ ನಗರದ ಪಿನ್ನಾ ಗ್ರಾಮದಲ್ಲಿ 9 ವರ್ಷದ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
20 ವರ್ಷದ ಪ್ರವೀಣ್ ಕುಮಾರ್ ಎಂಬಾತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದು, ನಂತರ ಈ ವಿಚಾರವನ್ನು ಬೇರೆಯವರ ಜೊತೆಗೆ ಹೇಳಿದರೆ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.
ಬಾಲಕ ತಂದೆ ದೂರು ಸಲ್ಲಿಸಿದ ನಂತರ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಅನಿಲ್ ಕುಮಾರ್ ತಿಳಿಸಿದ್ದಾರೆ. ಬಾಲಕನನ್ನು ತನ್ನ ಜಮೀನಿಗೆ ಕರೆದುಕೊಂಡು ಹೋದ ಪ್ರವೀಣ್ ಕುಮಾರ್ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಸಂತ್ರಸ್ತ ಬಾಲಕ ಮನೆಗೆ ಬಂದ ನಂತರ ಈ ವಿಚಾರವನ್ನು ಮನೆಗೆ ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಪೊಲೀಸರು ಕುಮಾರನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಮಥುರಾದಲ್ಲಿ ಬಾಲಕನೋರ್ವನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ನವೆಂಬರ್ 4 ರಿಂದಲೂ ತಲೆಮರೆಸಿಕೊಂಡಿದ್ದ ಸಲ್ಮಾನ್ ಮತ್ತು ಹಶಿನ್ ಎಂಬವರನ್ನು ಬಂಧಿಸಲಾಗಿದೆ. ಇವರ ಹೀನಕೃತ್ಯವನ್ನು ವ್ಯಕ್ತಿಯೋರ್ವ ವಿಡಿಯೋ ಮಾಡಿದ್ದರಿಂದ ಆರೋಪಿಗಳನ್ನು ಬಂಧಿಸಲು ಸಾಧ್ಯವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics