ದೇಶ

ತಮಿಳುನಾಡು: ಸಬ್ ಇನ್ಸ್ ಪೆಕ್ಟರ್ ಶ್ರೇಣಿಗಿಂತ ಕೆಳಗಿನ ಅಧಿಕಾರಿಗಳು ಕರ್ತವ್ಯದ ವೇಳೆ ಮೊಬೈಲ್ ಬಳಸುವಂತಿಲ್ಲ!

Srinivas Rao BV
ಚೆನ್ನೈ: ಕರ್ತವ್ಯ ನಿರ್ವಹಣೆ ವೇಳೆ ಸಬ್ ಇನ್ಸ್ ಪೆಕ್ಟರ್ ಶ್ರೇಣಿಗಿಂತ ಕೆಳಗಿನ ಅಧಿಕಾರಿಗಳು ಮೊಬೈಲ್ ಬಳಕೆ ಮಾಡುವಂತಿಲ್ಲ ಎಂಬ ಹೊಸ ನಿಯಮವನ್ನು ತಮಿಳುನಾಡು ಪೊಲೀಸ್ ಇಲಾಖೆ ಜಾರಿಗೆ ತಂದಿದೆ. 
ಮೊಬೈಲ್ ಫೋನ್ ಬಳಕೆ ಮಾಡುವುದು ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಲಿದೆ ಎಂಬ ಕಾರಣಕ್ಕೆ ಈ ನಿಯಮ ಜಾರಿಗೆ ತರಲಾಗಿದೆ. ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುವ ಪುರುಷ ಪೊಲೀಸ್ ಅಧಿಕಾರಿಗಳಿಗೆ ವಿಶೇಷವಾಗಿ ಈ ಸೂಚನೆ ನೀಡಲಾಗಿದ್ದು ತಮಿಳುನಾಡು ಡಿಐಜಿ ಕಚೇರಿಯಿಂದ ಈ ಆದೇಶ ಹೊರಡಿಸಲಾಗಿದೆ. 
"ಮುಖ್ಯವಾದ ಭದ್ರತಾ ಕರ್ತವ್ಯಕ್ಕೆ ನೇಮಕ ಮಾಡಲಾಗಿರುವವರು ನಿರಂತರವಾಗಿ ವಾಟ್ಸ್ ಆಪ್ ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡುತ್ತಿರುತ್ತಾರೆ. ಇದರಿಂದಾಗಿ ಕರ್ತವ್ಯ ನಿರ್ವಹಣೆಗೆ ಅಡಚಣೆ ಉಂಟಾಗುತ್ತಿದೆ, ಆದ್ದರಿಂದ ಸಬ್ ಇನ್ಸ್ ಪೆಕ್ಟರ್ ಶ್ರೇಣಿಗಿಂತ ಉನ್ನತ ಅಧಿಕಾರಿಗಳು ಮಾತ್ರ ಕರ್ತವ್ಯ ನಿರ್ವಹಣೆ ವೇಳೆ ಮೊಬೈಲ್ ಗಳನ್ನು ಬಳಕೆ ಮಾಡಬಹುದಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 
SCROLL FOR NEXT