ದೇಶ

ಸಾರ್ಕ್ ಶೃಂಗಸಭೆ: ಪಾಕ್ ಆಹ್ವಾನ ತಿರಸ್ಕರಿಸಿದ ಭಾರತ

Manjula VN
ನವದೆಹಲಿ: ಇಸ್ಲಾಮಾಬಾದ್'ನಲ್ಲಿ ನಡೆಯಲಿರುವ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸುವಂತೆ ಪಾಕಿಸ್ತಾನ ನೀಡಿರುವ ಆಹ್ವಾನವನ್ನು ಭಾರತ ಬುಧವಾರ ತಿರಸ್ಕರಿಸಿದೆ. 
ಪಾಕಿಸ್ತಾನದಲ್ಲಿ ನಡೆಯಲಿರುವ ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳದಿರುವ ಭಾರತದ ನಿಲುವು ಬದಲಾಗುವುದಿಲ್ಲ. ಸಾರ್ಕ್ ಶೃಂಗಸಭೆಯಲ್ಲಿ ಭಾರತ ಪಾಲ್ಗೊಳ್ಳುವುದೂ ಇಲ್ಲ ಎಂದು ಮೂಲಗಳು ತಿಳಿಸಿವೆ. 
ಸಾರ್ಕ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪಾಕಿಸ್ತಾನದಿಂದ ಭಾರತಕ್ಕೆ ಯಾವುದೇ ರೀತಿಯ ವಿಶೇಷ ಆಹ್ವಾನಗಳು ಬಂದಿಲ್ಲ ಎಂದು ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
2016ರಲ್ಲೇ ಸಾರ್ಕ್ ಸಮ್ಮೇಳನ ಪಾಕಿಸ್ತಾನದಲ್ಲಿ ನಡೆಯಬೇಕಿತ್ತು. ಆದರೆ, ಅದೇ ವೇಳೆ ಉರಿ ಸೇನಾ ನೆಲೆ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ನಡೆಸಿದ್ದರಿಂದ, ಶೃಂಗಸಭೆಯಿಂದ ಭಾರತ ಹಿಂದೆ ಸರಿದಿತ್ತು. ಬಳಿಕ ಬಾಂಗ್ಲಾ, ಭೂತಾನ್ ಮತ್ತು ಆಫ್ಘಾನಿಸ್ತಾನ ಕೂಡ ಭಾಗವಹಿಸಿರಲಿಲ್ಲ. ಹೀಗಾಗಿ ವಿಧಿಯಿಲ್ಲದೆ ಪಾಕಿಸ್ತಾನ ಸಮ್ಮೇಳನವನ್ನು ರದ್ದು ಮಾಡಿತ್ತು. ಆದರೆ, ಈ ವರ್ಷದ ಸಮ್ಮೇಳನಕ್ಕೆ ಮೋದಿ ಭಾಗವಿಸುತ್ತಾರೆಯೇ ಎಂಬ ಬಗ್ಗೆ ಪ್ರಧಾನಮಂತ್ರಿಗಳ ಕಾರ್ಯಾಲಯದಿಂದ ಈ ವರೆಗೂ ಅಧಿಕೃತ ಮಾಹಿತಿಗಳು ಲಭ್ಯವಾಗಿಲ್ಲ. 
ಕರ್ತಾರ್ಪುರದಲ್ಲಿ ಕಾರಿಡಾರ್ ನಿರ್ಮಾಣಕ್ಕೆ ಭಾರತ ನಿರ್ಧರಿಸಿರುವ ಹಿನ್ನಲೆಯಲ್ಲಿ ಪಾಕಿಸ್ತಾನ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ವಿಶೇಷ ಆಹ್ವಾನ ನೀಡುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. 
SCROLL FOR NEXT