ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಗೈಯ್ಯಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದೆ.
ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನೆ ಮೇಲೆ ದಾಳಿ ಮಾಡಲು ಯತ್ನಿಸಿದ ಇಬ್ಬರು ಉಗ್ರರನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಪುಲ್ವಾಮಾ ಜಿಲ್ಲೆಯ ಆವಂತಿಪೋರಾ ಪ್ರದೇಶದ ಶಾರ್ಷಾಲ್ ನಲ್ಲಿ ಉಗ್ರರನ್ನು ಹೊಡದುರುಳಿಸಲಾಗಿದೆ. ಅಂತೆಯೇ ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ತೀವ್ರ ಶೋಧ ನಡೆಸಲಾಗುತ್ತಿದೆ.
ಹತರಾದ ಉಗ್ರರ ಶವಗಳನ್ನು ಸೇನೆ ವಶಪಡಿಸಿಕೊಂಡಿದ್ಜು, ಅಂತೆಯೇ ಉಗ್ರರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೂ ಮೃತ ಉಗ್ರರ ಗುರುತು ಪತ್ತೆಯಾಗಿಲ್ಲ.