ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಉಚಿತ ಹಸು ವಿತರಣೆ ಭರವಸೆ

ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 2 ಲಕ್ಷ ರೂವರೆಗೂ ರೈತರ ಸಾಲ ಮನ್ನಾ ಸೇರಿದಂತೆ ಪ್ರತಿವರ್ಷ ಒಂದು ಲಕ್ಷ ಜನರಿಗೆ ಉಚಿತವಾಗಿ ಹಸು ವಿತರಿಸುವುದಾಗಿ ಭರವಸೆ ನೀಡಲಾಗಿದೆ.

ಹೈದ್ರಾಬಾದ್ :  ಡಿಸೆಂಬರ್ 7 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 2 ಲಕ್ಷ ರೂವರೆಗೂ ರೈತರ ಸಾಲ ಮನ್ನಾ, ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ, ಪ್ರತಿವರ್ಷ ಒಂದು ಲಕ್ಷ ಜನರಿಗೆ ಉಚಿತವಾಗಿ ಹಸು ವಿತರಿಸುವುದಾಗಿ ಭರವಸೆ ನೀಡಲಾಗಿದೆ.

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಲಕ್ಷ್ಮಣ್ ಇಂದು  ಬಿಡುಗಡೆಗೊಳಿಸಿದ ಪ್ರಣಾಳಿಕೆಯಲ್ಲಿ, ಹಣ ಮತ್ತಿತರ ಆಮಿಷವೊಡ್ಡಿ ಬಲವಂತದಿಂದ   ಧರ್ಮಾಂತರ ಮಾಡುವುದಕ್ಕೆ   ಶಾಸನದ ಮೂಲಕ ತಡೆಹಾಕಲಾಗುವುದು ಎಂದು ಭರವಸೆ ನೀಡಿದೆ.

 ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವ ರೋಹಿಂಗ್ಯಾ ಜನರನ್ನು  ವಾಪಾಸ್ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಬ್ಬ ರೈತರಿಗೂ  ಉಚಿತವಾಗಿ ಕೊಳಬೆ ಬಾವಿ ತೋರಿಸಿ ಗುಣಮಟ್ಟದ ಬೀಜ ವಿತರಣೆ ಮಾಡುವುದಾಗಿ ಹೇಳಲಾಗಿದೆ.

7ರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್. ಪದವಿ ಹಾಗೂ ಅದಕ್ಕೂ ಮೇಲ್ಪಟ್ಟ ವಿದ್ಯಾರ್ಥಿನಿಯರು   ಸ್ಕೂಟಿ ಪಡೆಯಲು  ಶೇ.50 ರಷ್ಟು ಸಹಾಯ ಧನ  ನೀಡಲಾಗುವುದು, 2022ರೊಳಗೆ ಎಲ್ಲಾ ಬಡವರಿಗೂ ಮನೆ ಕಟ್ಟಿಸಿಕೊಳ್ಳಲಾಗುವುದು ಎಂದು ಬಿಜೆಪಿ ಭರವಸೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ