ಸಚಿನ್ ಪೈಲಟ್ - ಅಶೋಕ್ ಗೆಹ್ಲೋಟ್ 
ದೇಶ

ರಾಜಸ್ಥಾನ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಸಾಲ ಮನ್ನಾ, ನಿರುದ್ಯೋಗ ಭತ್ತೆ ನೀಡುವ ಭರವಸೆ

2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿರುವ ಪಂಚರಾಜ್ಯಗಳ ಚುನಾವಣೆ ಕಾವು ಹೆಚ್ಚುತ್ತಿದ್ದು...

ಜೈಪುರ್: 2019ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಬಿಂಬಿಸಲಾಗುತ್ತಿರುವ ಪಂಚರಾಜ್ಯಗಳ ಚುನಾವಣೆ ಕಾವು ಹೆಚ್ಚುತ್ತಿದ್ದು, ಡಿಸೆಂಬರ್ 7ರಂದು ನಡೆಯುವ  ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಗುರುವಾರ​ ಪ್ರಣಾಳಿಕೆ ಬಿಡುಗಡೆ ಮಾಡಿದೆ.
ರಾಜಸ್ಥಾನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಪೈಲಟ್ ಹಾಗೂ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಇಂದು ಕಾಂಗ್ರೆಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ರೈತರ ಸಾಲ ಮನ್ನಾ ಹಾಗೂ ಯುವಕರಿಗೆ ನಿರುದ್ಯೋಗ ಭತ್ತೆ ಸೇರಿದಂತೆ ಹಲವು ಭರವಸೆಗಳನ್ನು ಮತದಾರರಿಗೆ ನೀಡಲಾಗಿದೆ.
ನಿರುದ್ಯೋಗಿಗಳಿಗೆ 3,500 ರು. ಮಾಸಿಕ ಭತ್ಯೆ, ಪರ್ತಕರ್ತರಿಗೆ ಕಾನೂನು ಭದ್ರತೆ ನೀಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಿಸಲಾಗಿದೆ.
ಈ ಮುಂಚೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್​ ಗಾಂಧಿ ಅವರು ಸಹ ಅಧಿಕಾರಕ್ಕೆ ಬಂದ ಹತ್ತು ದಿನಗಳಲ್ಲಿ ರಾಜ್ಯದ ರೈತರ ಸಾಲಮನ್ನಾ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಅದನ್ನು ಈಗ ಪ್ರಣಾಳಿಕೆಯಲ್ಲಿ ಸೇರಿಸಲಾಗಿದೆ.
ನಮ್ಮ ಪ್ರಣಾಳಿಕೆ ಒಂದು ಪುಸ್ತಕ ಅಲ್ಲ. ಅದೊಂದು ನಮ್ಮ ಬದ್ಧತೆ ಎಂದು ಸಚಿನ್ ಪೈಲಟ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ಕನ್ನಡಿಗರು ಕೊಟ್ಟ ದುಡ್ಡಲ್ಲೇ AR Rahman ತಮ್ಮ ಮೊದಲ ಸ್ಟುಡಿಯೋ ಕಟ್ಟಿದ್ದು: ನಟ ಯಶ್

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!