ಪರೀಕ್ಷೆಲಿ ನಕಲು ಮಾಡಿ ಸಿಕ್ಕಿಬಿದ್ದದ್ದಕ್ಕೆ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ! 
ದೇಶ

ಕೇರಳ: ಪರೀಕ್ಷೆಲಿ ನಕಲು ಮಾಡಿ ಸಿಕ್ಕಿಬಿದ್ದದ್ದಕ್ಕೆ ರೈಲಿಗೆ ತಲೆಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದಿದ್ದ ವಿದ್ಯಾರ್ಥಿನಿಯೊಬ್ಬಳು ಚಲಿಸುವ ರೈಲಿನ ಮುಂದೆ ಹಾರಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಕೇರಳದ ಕೊಲ್ಲಮ್ ಜಿಲ್ಲೆಯಲ್ಲಿ ನಡೆದಿದೆ.

ಕೊಲ್ಲಮ್: ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದಿದ್ದ ವಿದ್ಯಾರ್ಥಿನಿಯೊಬ್ಬಳು ಚಲಿಸುವ ರೈಲಿನ ಮುಂದೆ ಹಾರಿ ಪ್ರಾಣ ಕಳೆದುಕೊಂಡಿರುವ ದಾರುಣ ಘಟನೆ ಕೇರಳದ ಕೊಲ್ಲಮ್ ಜಿಲ್ಲೆಯಲ್ಲಿ ನಡೆದಿದೆ.
ಕೊಲ್ಲಮ್ ಜಿಲ್ಲೆಯ ಫಾತಿಮಾ ಮಾತಾ ನ್ಯಾಷನಲ್ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ರಾಖಿ ಕೃಷ್ಣ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ,. ಈಕೆ ಸೆಮಿಸ್ಟರ್ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವೇಳೆ ಪ್ರಾದ್ಯಾಪಕರ ಕೈಗೆ ಸಿಕ್ಕಿ ಬಿದ್ದಿದ್ದು ಅವಳನ್ನು ನಕಲು ನಿಯಂತ್ರಣ ದಳದ ವಶಕ್ಕೆ ಒಪ್ಪಿಸಲಾಗಿತ್ತು.
ಈ ವೇಳೆ ನಕಲು ನಿಯಂತ್ರಣ ದಳದವರು ರಾಖಿಗೆ ಪೋಷಕರನ್ನು ಕಾಲೇಜಿಗೆ ಕರೆಸುವಂತೆ ಒತ್ತಡ ಹೇರಿದ್ದಾರೆ. ಆಗ 12 ಗಂಟೆ ಸುಮಾರಿಗೆ ಪೋಷಕರನ್ನು ಕರೆತರಲೆಂದು ಆಕೆ ಕಾಲೇಜು ತೊರೆದಿದ್ದಾಳೆ. ಆದರೆ ರಾಖಿ ಮನೆಗೆ ತಲುಪಲಿಲ್ಲ ಎನ್ನುವುದು ಅರಿತ ಕಾಲೇಜು ಸಿಬ್ಬಂದಿ ಆಕೆಯನ್ನು ಎಲ್ಲೆಡೆ ಹುಡುಕಿದ್ದು ಕಡೆಗೊಮ್ಮೆ ಯುವತಿಯ ಶವ ರೈಲ್ವೆ ಹಳಿ ಮೇಲೆ ಸಿಕ್ಕಿರುವುದು ತಿಳಿದಿದೆ.
ತಕ್ಷಣ  ಕಾಲೇಜು ಪ್ರಾದ್ಯಾಪಕರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.ಳಕ್ಕೆ ಆಗಮಿಸಿದ ಪೊಲೀಸರು ಮೃತ ಯುವತಿಯ ಶವವನ್ನು ತಿರುವನಂತಪುರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ಕೊಲ್ಲಂನ ಪೂರ್ವ ವಿಭಾಗದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

ಬಿಡದಿ ಟೌನ್‌ಶಿಪ್‌ ಯೋಜನೆ ಬಗ್ಗೆ BJP-JDS ಅಪಪ್ರಚಾರ, ರೈತರ ಭೂಮಿ ಬಲವಂತವಾಗಿ ಪಡೆಯಲ್ಲ: ಸಚಿವ ಯತೀಂದ್ರ

ಖಾತೆ ಹಂಚಿಕೆಗೂ ಮುನ್ನ ಸಚಿವ ನಾಗೇಂದ್ರಗೆ ಸಂಕಷ್ಟ! ವಿಶೇಷ ನ್ಯಾಯಾಲಯದ ಜಾಮೀನು ಷರತ್ತು ಉಲ್ಲಂಘಿಸಿದ ಆರೋಪ

ಮುಂಬೈ: ಬಾಲಿವುಡ್ ನಟಿಯ ಮೇಲೆ ಅತ್ಯಾಚಾರ ಆರೋಪ; 73 ವರ್ಷದ ಖ್ಯಾತ ಸಿನಿಮಾ ಡೈರೆಕ್ಟರ್ ಬಂಧನ!