ಸಾಂದರ್ಭಿಕ ಚಿತ್ರ 
ದೇಶ

ಮುಂಬೈ: 17 ವರ್ಷದ ಪತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮಹಿಳೆ ಬಂಧನ

17 ವರ್ಷದ ಅಪ್ರಾಪ್ತ ಬಾಲಕನನ್ನು ಮದುವೆಯಾಗಿ ಆತನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ 22 ವರ್ಷದ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮುಂಬೈ: 17 ವರ್ಷದ ಅಪ್ರಾಪ್ತ ಬಾಲಕನನ್ನು ಮದುವೆಯಾಗಿ ಆತನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ 22 ವರ್ಷದ ಮಹಿಳೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬಾಲಕನ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಮುಂಬೈನ ಬುದ್ಧ ಕಾಲೋನಿಯ ಮಹಿಳೆಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಮಧ್ಯೆ, ಮಹಿಳೆ ತಾನು ಅಪ್ರಾಪ್ತ ಪತಿಯೊಂದಿಗೆ ಸಮ್ಮತಿಯ ಸಂಬಂಧ ಹೊಂದಿದ್ದು, ತಮಗೆ 5 ತಿಂಗಳ ಹೆಣ್ಣು ಮಗುವಿದೆ ಎಂದು ಹೇಳಿಕೊಂಡಿದ್ದಾರೆ.
'ಟೈಮ್ಸ್​ ಆಫ್​ ಇಂಡಿಯಾ' ವರದಿಯ ಪ್ರಕಾರ, ಅಪ್ರಾಪ್ತ ಬಾಲಕನ ತಾಯಿ ಹಾಗೂ ಮಹಿಳೆ ಒಂದೇ ಪ್ರದೇಶದ ನಿವಾಸಿಗಳಾಗಿದ್ದು, ಎರಡು ವರ್ಷಗಳ ಹಿಂದೆ ತನ್ನ ಮಗನ ತಲೆ ಕೆಡಿಸಿ ಆತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ದೂರಿನಲ್ಲಿ ಕಳೆದ ವರ್ಷ ನವೆಂಬರ್ 8ರಂದು ಮಹಿಳೆ ಅಪ್ರಾಪ್ತ ಬಾಲಕನೊಂದಿಗೆ ಮದುವೆಯಾಗಿದ್ದು, ಎರಡು ವಾರಗಳ ನಂತರ ಇಬ್ಬರೂ ಮನಗೆ ಬಂದಿದ್ದರು ಎಂದು ತಿಳಿಸಲಾಗಿದೆ.
ಈ ಮಹಿಳೆಗೆ ಈಗಾಗಲೇ ಎರಡು ಬಾರಿ ಮದುವೆಯಾಗಿದ್ದು, ವಿಚ್ಛೇದನ ಪಡೆದಿದ್ದಾಳೆ ಎಂದು ಬಾಲಕನ ತಾಯಿ ಆರೋಪಿಸಿದ್ದಾರೆ.
ಆಕೆ ನನ್ನ ಮಗನನ್ನು ಮದುವೆಯಾಗಿ ತನ್ನ ಅಣ್ಣ ಮತ್ತು ಪೋಷಕರೊಂದಿಗೆ ನಮ್ಮ ಮನೆಯಲ್ಲೇ ಇದ್ದಳು. ಇದನ್ನು ನಾನು ಮತ್ತು ನನ್ನ ಮಗ ವಿರೋಧಿಸಿದಾಗ, ಅವಾಚ್ಯ ಶಬ್ಧಗಳಿಂದ ನಿಂದಿಸಿ ನಮಗೆ ಹೆದರಿಸಿದ್ದಳು. ನಂತರದ ದಿನಗಳಲ್ಲಿ ನಾನು ಮನೆ ಬಿಟ್ಟು ಹೋದೆ, ನನ್ನ ಹಿಂದೆಯೇ ಮಗನೂ ಬಂದನು," ಎಂದು ಅಪ್ರಾಪ್ತ ಯುವಕನ ತಾಯಿ ದೂರಿನಲ್ಲಿ ಆರೋಪಿಸಿದ್ದಾರೆ. 
ಮಗ ಮತ್ತು ಸೊಸೆ ಎರಡು ವರ್ಷ ನಿರಂತರವಾಗಿ ಸಂಪರ್ಕದಲ್ಲಿದ್ದರು. ನಂತರ ಆತನ ನಡವಳಿಕೆಯಲ್ಲಿ ಬದಲಾವಣೆ ಕಂಡುಬಂದಿತು.  ಆತ ಮಹಿಳೆಯನ್ನು ಭೇಟಿಯಾಗುವುದನ್ನು ನಿಲ್ಲಿಸಿದರೆ, ಮನೆಯಲ್ಲಿ ಈ ವಿಷಯ ತಿಳಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಳು ಎಂದು ಆತನ ತಾಯಿ ಹೇಳಿದ್ದಾರೆ.
 ಅಲ್ಲದೇ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಳು. ಹತ್ತನೇ ತರಗತಿಯಲ್ಲಿ ಫೇಲಾಗಿದ್ದ ನನ್ನ ಮಗನ ಮೇಲೆ ಮಾನಸಿಕ ಒತ್ತಡ ಹೇರಿದ್ದಳು ಎಂದು ಆತನ ತಾಯಿ ದೂರಿದ್ದಾರೆ.
ವಯಸ್ಸಿನಲ್ಲಿ ತನಗಿಂತ 5 ವರ್ಷ ಚಿಕ್ಕವನಿದ್ದ ತನ್ನ ಗಂಡನ ಮೇಲೆ ಪದೇ ಪದೇ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT