ಯೋಗಿ ಆದಿತ್ಯನಾಥ್ 
ದೇಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಸ್ಯದ ವಸ್ತುವಾಗಿದೆ: ಸಿಎಂ ಯೋಗಿ ಮುಜುಗರ ಉಂಟುಮಾಡಿದ ಸಂಪುಟ ಸಹೋದ್ಯೋಗಿ!

ಉತ್ತರ ಪ್ರದೇಶದಲ್ಲಿ ಆಪಲ್ ಸಂಸ್ಥೆಯ ಉದ್ಯೋಗಿಯ ಮೇಲೆ ಪೊಲೀಸ್ ಪೇದೆ ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಸ್ವತಃ ಸರ್ಕಾರದ ಸಚಿವರೇ ತೀವ್ರ ಅಸಮಾಧಾನಗೊಂಡಿದ್ದಾರೆ.

ಲಖನೌ: ಉತ್ತರ ಪ್ರದೇಶದಲ್ಲಿ ಆಪಲ್ ಸಂಸ್ಥೆಯ ಉದ್ಯೋಗಿಯ ಮೇಲೆ ಪೊಲೀಸ್ ಪೇದೆ ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಬಗ್ಗೆ ಸ್ವತಃ ಸರ್ಕಾರದ ಸಚಿವರೇ ತೀವ್ರ ಅಸಮಾಧಾನಗೊಂಡಿದ್ದಾರೆ. 
ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಸ್ವತಃ ಸರ್ಕಾರದ ಸಚಿವರೇ ಅಸಮಾಧಾನಗೊಂಡಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಂದರೆ ಹಾಸ್ಯದ ವಸ್ತುವಾಗಿಬಿಟ್ಟಿದೆ, ಯೋಗಿ ಆದಿತ್ಯನಾಥ್ ಅವರ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣ ವಿಫಲಗೊಂಡಿದೆ ಎಂದು ಹಿಂದುಳಿದ  ವರ್ಗ, ದಿವ್ಯಾಂಗ ಕಲ್ಯಾಣ ಇಲಾಖೆ ಸಚಿವ ಓಂ ಪ್ರಕಾಶ್ ರಾಜ್ಭರ್  ಹೇಳಿದ್ದಾರೆ. 
ಆಪಲ್ ಉದ್ಯೋಗಿಯಾಗಿದ್ದ ವಿವೇಕ್ ತಿವಾರಿ ಹತ್ಯೆ ಬಗ್ಗೆ ಸಿಬಿಐ ತನಿಖೆ ನಡೆಯಬೇಕೆಂದು ಓಂ ಪ್ರಕಾಶ್ ರಾಜ್ಭರ್ ಹೇಳಿದ್ದಾರೆ.  ಬಿಜೆಪಿ ಮಿತ್ರ ಪಕ್ಷವಾಗಿರುವ ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥರಾಗಿರುವ ರಾಜ್ಭರ್ ವಿವೇಕ್ ತಿವಾರಿ ಪ್ರಕರಣದಲ್ಲಿ ಪೊಲೀಸರು ನಡೆದಿರುವ ತಪ್ಪನ್ನು ಮುಚ್ಚಿಹಾಕುವುದಕ್ಕೆ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. 
ಎನ್ ಕೌಂಟರ್ ಹೆಸರಿನಲ್ಲಿ ಸಾಮಾನ್ಯ ನಾಗರಿಕರೊಬ್ಬರನ್ನು ಪೊಲೀಸರು ಹತ್ಯೆ ಮಾಡಿದ್ದಾರೆ. ಪೊಲೀಸರು ಹಣ ಪಡೆದು ಜನರನ್ನು ಹತ್ಯೆ ಮಾಡುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಂಬುದು ಹಾಸ್ಯದ ವಿಷಯವಾಗಿಬಿತ್ಟಿದೆ ಯೋಗಿ ಆದಿತ್ಯನಾಥ್ ಅವರು ಅಪರಾಧವನ್ನು ತಡೆಗಟ್ಟುವಲ್ಲಿ ಯಶಸ್ವಿಯೂ ಆಗಿಲ್ಲ. ಜನತೆಗೆ ತಾವು ಸುರಕ್ಷಿತರಾಗಿದ್ದೇವೆ ಎಂಬ ನೆಮ್ಮದಿಯೂ ಇಲ್ಲ ಎಂದು ರಾಜ್ಭರ್ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT