ಶಬರಿಮಲೆ ದೇವಾಲಯ 
ದೇಶ

ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ: ಸುಪ್ರೀಂ ತೀರ್ಪು ವಿರೋಧಿಸಿ ಅಯ್ಯಪ್ಪ ಭಕ್ತನಿಂದ ಆತ್ಮಹತ್ಯೆಗೆ ಯತ್ನ!

ವಿಶ್ವ ವಿಖ್ಯಾತ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದ ಕ್ರೋಧಿತನಾದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊ....

ಕೊಚ್ಚಿನ್: ವಿಶ್ವ ವಿಖ್ಯಾತ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದ ಕ್ರೋಧಿತನಾದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಪೋಲೀಸರು ಅವನನ್ನು ಬಂಧಿಸಿರುವ ಘಟನೆ ಕೇರಳದ ಕೊಚ್ಚಿನ್ ನಲ್ಲಿ ನಡೆದಿದೆ.
ಬಲಪಂಥೀಯ ಹಿಂದೂ ಸಂಘಟನೆ ಕಾರ್ಯಕರ್ತನಾದ ಶ್ರೀರಾಜ್ ತನ್ನ ಫೇಸ್ ಬುಕ್ ಖಾತೆಯಲ್ಲಿ ಶಬರಿಮಲೆ ಕುರಿತ ಸುಪ್ರೀಂ ತೀರ್ಪು ಪ್ರತಿಭಟಿಸಿ ತಾನು ಆತ್ಮಹತ್ಯೆಗೆ ಶರಣಾಗುತ್ತೇನೆಂದು ಬೆದರಿಕೆ ಹಾಕಿದ್ದನೆಂದು ಪೋಲೀಸರು ತಿಳಿಸಿದ್ದಾರೆ.
"ನಾನು ಕೋರ್ಟ್ ತೀರ್ಪಿನಿಂದ ಬೇಸತ್ತಿದ್ದೇನೆ. ಹೀಗಾಗಿ ಕೊಚ್ಚಿನ್ ಹೈಕೋರ್ಟ್ ವೃತ್ತ ಸಮೀಪ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ" ಶ್ರೀರಾಜ್ ಬರೆದುಕೊಂಡಿದ್ದ ಈ ಪೋಸ್ಟ್  ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು.
ತಕ್ಷಣ ಕಾರ್ಯಪ್ರವೃತ್ತರಾದ ಪೋಲೀಸರು ಆತ್ಮಹತ್ಯೆಗೆ ಮುಂದಾದ ವ್ಯಕ್ತಿಯನ್ನು ಉಳಿಸಿಕೊಳ್ಳುವ ಸಲುವಾಗಿ ಆತ ಹೇಳಿದ್ದ ಹೈಕೋರ್ಟ್ ವೃತ್ತದ ಬಳಿ ಧಾವಿಸಿದ್ದಾರೆ. ಅಲ್ಲಿ ಶ್ರೀರಾಜ್ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಸಿದ್ದನಾಗಿ ಪೆಟ್ರೋಲ್ ತುಂಬಿದ್ದ ಕ್ಯಾನ್ ನೊಡನೆ ಆಗಮಿಸಿದಾಗ ಅವನನ್ನು ಪೋಲೀಸರು ಬಂಧಿಸಿದ್ದಾರೆ.
ಶ್ರೀರಾಜ್ ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಕಲಿಸಿ ಚಿಕಿತ್ಸೆ ಕೊಡಿಸಿದ್ದು ಬಳಿಕ ಪೋಲೀಸ್ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಾಗಿದೆ.
ಪುರಾಣ ಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳ್ಯರ ಪ್ರವೇಶಕ್ಕೆ ಅನುಮತಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀಪ್ರು ಪ್ರಕಟಿಸಿತ್ತು. ಇದಕ್ಕೆ ಹಿಂದೆ ದೇವಾಲಯ ನಿಯಮಾವಳಿಯಂತೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರ್ಬಂಧವಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!