150ನೇ ಗಾಂಧಿ ಜಯಂತಿ: ರಾಜ್'ಘಾಟ್'ನಲ್ಲಿ ರಾಷ್ಟ್ರಪಿತರಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ 
ದೇಶ

150ನೇ ಗಾಂಧಿ ಜಯಂತಿ: ರಾಜ್'ಘಾಟ್'ನಲ್ಲಿ ರಾಷ್ಟ್ರಪಿತನಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

ರಾಷ್ಟ್ರಪಿತ ಮಹಾತ್ಮಾ ಗಾಂಧೀಯವರ 150ನೇ ವರ್ಷಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು...

ನವದೆಹಲಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಯವರ 150ನೇ ವರ್ಷಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜಧಾನಿ ದೆಹಲಿಯ ರಾಜ್'ಘಾಟ್'ಗೆ ಭೇಟಿ ನೀಡಿ ಬಾಪೂಜಿಯವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. 
ಇಂದು ಬೆಳಿಗ್ಗೆ ರಾಜ್'ಘಾಟ್'ಗೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹಾಗೂ ಬಿಜೆಪಿ ಹಿರಿಯ ನಾಯಕರೂ ಕೂಡ ಪುಷ್ಪನಮನ ಸಲ್ಲಿಸಿದರು. 
ಇದರಂತೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಗಾಂಧೀಜಿಯವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು. 
ಇಂದು ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಹುಟ್ಟುಹಬ್ಬವೂ ಆಗಿದ್ದು, ಲಾಲ್ ಬಹದ್ದೂರ್ ಶಾಸ್ತ್ರಿಯವರ ಸ್ಮಾರಕಕ್ಕೂ ಮೋದಿ ಹಾಗೂ ರಾಷ್ಟ್ರಪತಿಗಳು ಪುಷ್ಪ ನಮನ ಸಲ್ಲಿಸಿದರು. 
ರಾಷ್ಟ್ರಪಿತ ಗಾಂಧೀಜಿ ಹಾಗೂ ದೇಶದ ಎರಡನೇ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆಯನ್ನು ದೇಶದಾದ್ಯಂತ ಆಚರಿಸಲಾಗುತ್ತಿರುವ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿಯೂ ಪ್ರಧಾನಿ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT