ಸಂಗ್ರಹ ಚಿತ್ರ 
ದೇಶ

ಛತ್ತೀಸ್ಗಢದಲ್ಲಿ ಎನ್'ಕೌಂಟರ್; ಮೂವರು ನಕ್ಸಲರ ಹತ್ಯೆ

ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಮೂವರು ನಕ್ಸಲರನ್ನು ಹತ್ಯೆ ಮಾಡಿದ್ದಾರೆಂದು ಬುಧವಾರ ತಿಳಿದುಬಂದಿದೆ...

ರಾಯ್ಪುರ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು, ಮೂವರು ನಕ್ಸಲರನ್ನು ಹತ್ಯೆ ಮಾಡಿದ್ದಾರೆಂದು ಬುಧವಾರ ತಿಳಿದುಬಂದಿದೆ. 
ಮುಲೆರ್ ಗ್ರಾಮದಲ್ಲಿರುವ ಅರಣ್ಯ ಪ್ರದೇಶದಲ್ಲಿ ನಕ್ಸಲರು ಅಡಗಿ ಕುಳಿತಿರುವ ಮಾಹಿತಿಗಳು ತಿಳಿದುಬಂದ ಹಿನ್ನಲೆಯಲ್ಲಿ ಜಿಲ್ಲಾ ಮೀಸಲು ಪಡೆಗಳು ಕಾರ್ಯಾಚರಣೆ ನಡೆಸುತ್ತಿದ್ದವು. ಈ ವೇಳೆ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವ ಭಾರೀ ಗುಂಡಿನ ಕಾಳಗ ಆರಂಭವಾಗಿತ್ತು ಎಂದು ಸುಕ್ಮಾ ಎಸ್'ಪಿ ಅಭಿಷೇಕ್ ಮೀನಾ ಅವರು ಹೇಳಿದ್ದಾರೆ. 
ಕಾರ್ಯಾಚರಣೆ ಬಳಿಕ ಸ್ಥಳ ಪರಿಶೀಲನೆ ವೇಲೆ ಮೂವರು ನಕ್ಸಲರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ 315 ಬೋರ್ ರೈಫಲ್, 4 ಮುಜಲ್ ಲೋಡಿಂಗ್ ಗನ್, 1 ಪೈಪ್ ಬಾಂಬ್ ಮತ್ತು ಇತರೆ ಬಳಕೆಯ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. 
ಹತ್ಯೆಯಾದ ನಕ್ಸಲರ ಕುರಿತಂತೆ ಮಾಹಿತಿಗಳು ಲಭ್ಯವಾಗಿಲ್ಲ. ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಮುಂದುವರೆಸಿವೆ ಎಂದಿದ್ದಾರೆ. 
ಕಾರ್ಯಾಚರಣೆ ವೇಳೆ ಓರ್ವ ನಕ್ಸಲ್'ನನ್ನು ಜೀವಂತವಾಗಿ ಬಂಧನಕ್ಕೊಳಪಡಿಸಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ'.. 'ನಿಮ್ಮನ್ನು ಈರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ'; Kichcha Sudeepಗೆ ಪತ್ರ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!