ಅಮೆರಿಕಾದಲ್ಲಿ ಭೀಕರ ಅಪಘಾತ: ಗೀತಂ ವಿಶ್ವವಿದ್ಯಾಲಯದ ನಿರ್ದೇಶಕ ಸಾವು 
ದೇಶ

ಅಮೆರಿಕಾದಲ್ಲಿ ಭೀಕರ ಅಪಘಾತ: ಗೀತಂ ವಿಶ್ವವಿದ್ಯಾಲಯದ ನಿರ್ದೇಶಕ ಎಂವಿವಿಎಸ್ ಮೂರ್ತಿ ಸಾವು

ಅಮೆರಿಕಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗೀತಂ ವಿಶ್ವವಿದ್ಯಾಲಯದ ನಿರ್ದೇಶಕ ಹಾಗೂ ಆಂಧ್ರಪ್ರದೇಶ ರಾಜ್ಯ ಎಂಎಲ್'ಸಿ ಎಂವಿವಿಎಸ್ ಮೂರ್ತಿಯವರು ಮೃತಪಟ್ಟಿದ್ದಾರೆಂದು ಬುಧವಾರ ತಿಳಿದುಬಂದಿದೆ...

ವಿಜಯವಾಡ: ಅಮೆರಿಕಾದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಗೀತಂ ವಿಶ್ವವಿದ್ಯಾಲಯದ ನಿರ್ದೇಶಕ ಹಾಗೂ ಆಂಧ್ರಪ್ರದೇಶ ರಾಜ್ಯ ಎಂಎಲ್'ಸಿ ಎಂವಿವಿಎಸ್ ಮೂರ್ತಿಯವರು ಮೃತಪಟ್ಟಿದ್ದಾರೆಂದು ಬುಧವಾರ ತಿಳಿದುಬಂದಿದೆ. 
ನಾಲ್ವರೊಂದಿಗೆ ಮೂರ್ತಿಯವರು ಕ್ಯಾಲಿಫೋರ್ನಿಯಾದಿಂದ ಅಲಸ್ಕಾಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ಬಳಿಕ ಕಾರಿನಲ್ಲಿದ್ದ ನಾಲ್ವರು ಹಾಗೂ ಮೂರ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಮೃತರನ್ನು ಬಸವ ಪುಣ್ಣಯ್ಯ, ವೀರಮಚಿನೇನಿ ಶಿವರಾಮಕೃಷ್ಣ ಮತ್ತು ವಿಬಿಆರ್ ಚೌಧರಿ ಎಂದು ಗುರ್ತಿಸಲಾಗಿದೆ. ಮೂರ್ತಿಯವರು ಅಮೆರಿಕಾದಲ್ಲಿ ಅ.6 ರಂದು ಗೀತಂ ಅಲೂಮ್ನಿ ಅಸೋಸಿಯೇಷನ್ ಆಫ್ ನಾರ್ತ್ ಅಮೆರಿಕಾ (ಜಿಎಎನ್ಎಎಂ) ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಹಾಜರಾಗುವ ಸಲುವಾಗಿ ಭೇಟಿ ನೀಡಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. 
ಡಾ.ಮುತ್ತುಕುಮಿಲಿ ವೀರ ವೆಂಕಟ ಸತ್ಯನಾರಾಯಣ ಮೂರ್ತಿವರು ಎಂವಿವಿಎಸ್ ಮೂರ್ತಿಯೆಂದೇ ಖ್ಯಾತಿ ಪಡೆದಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangkok pubನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಜೀವ ದಹನ; 63ಕ್ಕೂ ಹೆಚ್ಚು ಮಂದಿಗೆ ಗಾಯ, ವಿದ್ಯುತ್ ದೋಷವೇ ದುರಂತಕ್ಕೆ ಕಾರಣ?

ನಾಳೆ ಅರ್ಧಕ್ಕೆ ಹಾರಲಿದೆ ತ್ರಿವರ್ಣ ಧ್ವಜ; ದೇಶಾದ್ಯಂತ ಶೋಕಾಚರಣೆ: ಕತಾರ್‌ನ ಮಾಜಿ ಅಮೀರ್ ನಿಧನಕ್ಕೆ PM ಮೋದಿ ಸಂತಾಪ

ಅಮೆರಿಕ ಜೊತೆ ಒಪ್ಪಂದ 'ಮುಗಿದಿದೆ': ಹೊಸ ದಾಳಿಗಳ ಬೆನ್ನಲ್ಲೇ ಇರಾನ್ ಘೋಷಣೆ

ಮಾರುವೇಷ ಯಾಕೆ ಸ್ವಾಮಿ.. ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

'ಊಸರವಳ್ಳಿಯಂತೆ ಬದಲಾಗ್ತಾರೆ': ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಯಲ್ಲೇ ಭಾಷಣ; ನೆಟ್ಟಿಗರು ಗರಂ, Video