ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ: ಸುಪ್ರೀಂಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸಲ್ಲ- ಕೇರಳ ಸಿಎಂ

Lingaraj Badiger
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಎಲ್ಲ ವಯಸ್ಸಿನ ಮಹಿಳೆಯರಿಗೆ ಮುಕ್ತ ಪ್ರವೇಶ ಅವಕಾಶ ಕಲ್ಪಿಸಿದ ಸುಪ್ರೀಂ ಕೋರ್ಟ್‌ ಆದೇಶವನ್ನು ಪಾಲಿಸಲು ಕೇರಳ ಸರ್ಕಾರ ಬದ್ಧವಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಇಂದು ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇರಳ ಸಿಎಂ, ರಾಜ್ಯ ಸರ್ಕಾರ ಶಬರಿಮಲೆಗೆ ಮಹಿಳೆಯರ ಪ್ರವೇಶದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದರು.
ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಎಲ್ಲಾ ವಯಸ್ಸಿನ ಮಹಿಳೆಯರಿಗೆ ಸೂಕ್ತ ಭದ್ರತೆ ಮತ್ತು ಇತರೆ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ಎಲ್ಲಾ ಅಂಶಗಳನ್ನು ಪರಿಗಣಿಸಿ ತೀರ್ಪು ನೀಡಿದೆ. ಕಾನೂನು ಪಾಲಿಸುವ ರಾಜ್ಯವಾಗಿ ನಾವು ಸುಪ್ರೀಂ ಕೋರ್ಟ್ ದೇಶವನ್ನು ಜಾರಿಗೊಳಿಸುತ್ತೇವೆ ಎಂದು ಪಿಣರಾಯ್ ವಿಜಯನ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಮಂಗಳವಾರ ನಾಲ್ಕು ಸಾವಿರಕ್ಕೂ ಹೆಚ್ಚು ಮಹಿಳೆಯರು ಪ್ರತಿಭಟನೆ ನಡೆಸಿದರು. ಆದೇಶವನ್ನು ಸುಪ್ರೀಂ ಕೋರ್ಟ್‌ ಪುನರ್‌ ಪರಿಶೀಲಿಸಬೇಕು ಮತ್ತು ಸದ್ಯ ನೀಡಲಾಗಿರುವ ಆದೇಶದ ವಿರುದ್ಧ ಕೇರಳ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದ್ದರು.
SCROLL FOR NEXT