ಸೋನಿಯಾ ಗಾಂಧಿ 
ದೇಶ

ಊಟದ ನಂತರ ತಟ್ಟೆ ತೊಳೆದ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ: ವಿಡಿಯೋ ವೈರಲ್

ರಾಹುಲ್ ಗಾಂಧಿ ಭಾಷಣಗಳ ವಿಡಿಯೋ ವೈರಲ್ ಆಗುವುದು ಸಹಜ. ಆದರೆ ಈಗ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಡಿಯೋ

ಮುಂಬೈ: ರಾಹುಲ್ ಗಾಂಧಿ ಭಾಷಣಗಳ ವಿಡಿಯೋ ವೈರಲ್ ಆಗುವುದು ಸಹಜ. ಆದರೆ ಈಗ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿಡಿಯೋ ಒಂದು ವೈರಲ್ ಆಗತೊಡಗಿದೆ. 
ಮಹಾರಾಷ್ಟ್ರದ ವಾರ್ಧಾದಲ್ಲಿ ಹಮ್ಮಿಕೊಂಡಿದ್ದ ಸೇವಾಗ್ರಾಮದಲ್ಲಿ ಮಧ್ಯಾಹ್ನ ಭೋಜನ ಮಾಡಿದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಇಬ್ಬರೂ ತಮ್ಮ ತಟ್ಟೆಯನ್ನು ಸ್ವತಃ ತಾವೇ ತೊಳೆದಿದ್ದಾರೆ. 
ಮಹಾತ್ಮ ಗಾಂಧಿಯವರ 150ನೇ ಜನ್ಮದಿನಾಚರಣೆಯ ಅಂಗವಾಗಿ ಮಹಾರಾಷ್ಟ್ರದ ವಾರ್ಧಾ ಬಳಿಯಿರುವ ಸೇವಾಗ್ರಾಮದ ಆಶ್ರಮದಲ್ಲಿ ಪ್ರಾರ್ಥನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಭೆಗೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಯವರು ಆಗಮಿಸಿದ್ದರು.  ಪ್ರಾರ್ಥನಾ ಸಭೆಯ ಬಳಿಕ ಭೋಜನ ಮಾಡಿದ ಇಬ್ಬರೂ ನಾಯಕರು ಸ್ವತಃ ತಮ್ಮ ತಟ್ಟೆ ತೊಳೆಯುವುದರ ಮೂಲಕ ಗಾಂಧಿ ಜಯಂತಿಯ ದಿನವಾದರೂ ತಮ್ಮ ಸರಳತೆಯನ್ನು ಪ್ರದರ್ಶಿಸಿದ್ದಾರೆ. 
ಗಾಂಧಿಜಿ ಅವರು ತಮ್ಮ ಜೀವಿತದ ಅವಧಿಯಲ್ಲಿ ಮಹಾರಾಷ್ಟ್ರದ ವಾರ್ಧದಲ್ಲಿ ಕೆಲವು ದಿನಗಳನ್ನು ಕಳೆದಿದ್ದರು. ಹೀಗಾಗಿ ಸೇವಾಗ್ರಾಮ ಆಶ್ರಮ ಮಹತ್ವ ಪಡೆದುಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮೆ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್