ಸಾಂದರ್ಭಿಕ ಚಿತ್ರ 
ದೇಶ

ಮಗನ ಸಾವಿನಿಂದ ಕಂಗೆಟ್ಟ ಮುಸ್ಲಿಂ ತಂದೆ ಹಿಂದೂ ಧರ್ಮಕ್ಕೆ ಮತಾಂತರ!

ಮಗನ ಕೊಲೆ ಪ್ರಕರಣವನ್ನು ಸ್ವಾಭಾವಿಕ ಸಾವು ಎಂದು ದಾಖಲಿಸಿದೆ ಪೊಲೀಸರ ವರ್ತನೆಯಿಂದ ಮನನೊಂದ ತಂದೆಯೊಬ್ಬ ತನ್ನ ಕುಟುಂಬದ ...

ಬಾಘ್ಘತ್: ಮಗನ ಕೊಲೆ ಪ್ರಕರಣವನ್ನು ಸ್ವಾಭಾವಿಕ ಸಾವು ಎಂದು ದಾಖಲಿಸಿದೆ ಪೊಲೀಸರ ವರ್ತನೆಯಿಂದ ಮನನೊಂದ ತಂದೆಯೊಬ್ಬ ತನ್ನ ಕುಟುಂಬದ ಸದಸ್ಯರೊಂದಿಗೆ ಮುಸ್ಲಿಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.
ಭದ್ರಕಾ ಗ್ರಾಮದ  ನಿವಾಸಿಯಾದ ಅಖ್ತರ್ ಸೋಮವಾರ ತನ್ನ ಕುಟುಂಬದ 12 ಮಂದಿ ಸದಸ್ಯರೊಂದಿಗೆ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಈ ಸಂಬಂಧ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ಅವರಿಗೆ ಸಲ್ಲಿಸಿದ್ದಾರೆ, ಜೊತೆಗೆ ತಾವು ಸ್ವ ಇಚ್ಚೆಯಿಂದ ಮತಾಂತರಗೊಂಡಿರುವುದಾಗಿ ತಿಳಿಸಿದ್ದಾರೆ.
ಪೊಲೀಸರು ತಮ್ಮ ಮಗನ ಸಾವಿನ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ಮಾಡಲಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೆಲ ತಿಂಗಳುಗಳ ಹಿಂದೆ ಅಖ್ತರ್ ಪುತ್ರ ಸಾವನ್ನಪ್ಪಿದ್ದ, ಆದರೆ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿಲ್ಲ, ಅಕ್ತರ್ ಪುತ್ರ ಗುಲ್ಷನ್ ಕೊಲೆಯಾಗಿತ್ತು, ಆದರೆ ಅದನ್ನು  ಆತ್ಮಹತ್ಯೆ ಎಂದು ಬಿಂಬಿಸಲಾಗಿತ್ತು, ಈ ಸಂಬಂಧ ತಮಗೆ ಸಹಾಯ ಮಾಡುವಂತೆ ತಮ್ಮ ಸಮುದಾಯದವರನ್ನು ಕೇಳಿದ್ದರು. ಆದರೆ ಯಾರೋಬ್ಬರು ಅವರ ಸಹಾಯಕ್ಕೆ ಬರಲಿಲ್ಲ,  ಹೀಗಾಗಿ ಅಕ್ತರ್ ಕುಟುಂಬಸ್ಥರು ತಮ್ಮ ಧರ್ಮವನ್ನು ಬದಲಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT