ದೇಶ

2019 ರ ಫೆಬ್ರವರಿಯಲ್ಲಿ ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ: ಐಸಿಜೆ ವೆಬ್ ಸೈಟ್ ನಲ್ಲಿ ನೇರಪ್ರಸಾರ

Srinivas Rao BV
ಹೇಗ್: 2019 ರ ಫೆ.18-21 ರಂದು ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ಕುಲಭೂಷಣ್ ಜಾಧವ್ ಪ್ರಕರಣದ ವಿಚಾರಣೆ ನಡೆಸಲಿದೆ. ವಿಶ್ವಸಂಸ್ಥೆಯ ಭಾಗವಾಗಿರುವ ನ್ಯಾಯಾಲಯ ಈ ಬಗ್ಗೆ ಮಾಹಿತಿ ನೀಡಿದೆ. 
ಪಾಕಿಸ್ತಾನದಲ್ಲಿ ಬೇಹುಗಾರಿಕೆ ಹಾಗೂ ಭಯೋತ್ಪಾದನೆ ಉತ್ತೇಜಿಸುತ್ತಿರುವ ಆರೋಪದ ಮೇಲೆ 2017 ರ ಏಪ್ರಿಲ್ ನಲ್ಲಿ ಕುಲಭೂಷಣ್ ಜಾಧವ್ (48) ಗೆ ಪಾಕಿಸ್ತಾನ ಕೋರ್ಟ್ ಮರಣದಂಡನೆ ಶಿಕ್ಷೆ ವಿಧಿಸಿತ್ತು. ಪಾಕ್ ಕೋರ್ಟ್ ಆದೇಶವನ್ನು ಪ್ರಶ್ನಿಸಿ 2017 ರಲ್ಲಿ ಭಾರತ ಅಂತಾರಾಷ್ಟ್ರೀಯ ನ್ಯಾಯಾಲಯದ ಮೆಟ್ಟಿಲೇರಿತ್ತು.  ಐಸಿಜೆ ಪಾಕ್ ಕೋರ್ಟ್ ಆದೇಶಕ್ಕೆ ತಡೆ ನೀಡಿ, ಕುಲಭೂಷಣ್ ಜಾಧವ್ ಗೆ ವಿಧಿಸಲಾಗಿದ್ದ ಗಲ್ಲು ಶಿಕ್ಷೆಯನ್ನು ತಾತ್ಕಾಲಿಕವಾಗಿ ತಡೆಹಿಡಿತ್ತು. ಈಗ ಈ ಪ್ರಕರಣದ ವಿಚಾರಣೆ ಮತ್ತೆ ಆರಂಭವಾಗಲಿದ್ದು ಫೆ.18-21 ರಂದು ನಡೆಯಲಿರುವ ವಿಚಾರಣೆಯನ್ನು ಕೋರ್ಟ್ ವೆಬ್ ಸೈಟ್ ನಲ್ಲಿ ಇಂಗ್ಲೀಷ್ ಹಾಗೂ ಫ್ರೆಂಚ್ ಭಾಷೆಗಳಲ್ಲಿ ನೇರ ಪ್ರಸಾರ ಮಾಡುವುದಕ್ಕೆ ತೀರ್ಮಾನಿಸಲಾಗಿದೆ. 
ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಭಾರತ ಹಾಗೂ ಪಾಕಿಸ್ತಾನ ಈಗಾಗಲೇ ತಮ್ಮ ಅರ್ಜಿಗಳನ್ನು ಸಲ್ಲಿಸಿದ್ದು, ಕುಲಭೂಷಣ್ ಜಾಧವ್ ಪ್ರಕರಣದಲ್ಲಿ ಆತನಿಗೆ ಕೌನ್ಸಲರ್ ನೊಂದಿಗೆ ಮಾತುಕತೆ ನಡೆಸಲು ಅವಕಾಶ ನೀಡದೇ ಪಾಕಿಸ್ತಾನ ವಿಯೆನ್ನಾ ಒಪ್ಪಂದವನ್ನು ಉಲ್ಲಂಘನೆ ಮಾಡಿದೆ ಎಂದು ಭಾರತ ಆರೋಪಿಸಿದೆ. 
SCROLL FOR NEXT