ಶಬರಿಮಲೆಗೆ ಮಹಿಳೆಯರು: ಕೋರ್ಟ್ ಆದೇಶ ಜಾರಿಗೊಳಿಸಲು ಮುಂದಾದ ಕೇರಳ ಸರ್ಕಾರದ ಬಗ್ಗೆ ಆರ್ ಎಸ್ಎಸ್ ಹೇಳಿದ್ದು ಹೀಗೆ 
ದೇಶ

ಶಬರಿಮಲೆಗೆ ಮಹಿಳೆಯರು: ಕೋರ್ಟ್ ಆದೇಶ ಜಾರಿಗೊಳಿಸಲು ಮುಂದಾದ ಕೇರಳ ಸರ್ಕಾರದ ಬಗ್ಗೆ ಆರ್ ಎಸ್ಎಸ್ ಹೇಳಿದ್ದು ಹೀಗೆ

ಶಬರಿಮಲೆಗೆ ಮಹಿಳೆಯರಿಗೆ ವಯಸ್ಸಿನ ಮಿತಿ ಇಲ್ಲದೇ ಪ್ರವೇಶ ನೀಡಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿ ದಿನಗಳೇ ಕಳೆದರೂ ಈ ಬಗ್ಗೆ ಚರ್ಚೆ ಇನ್ನೂ ಚಾಲ್ತಿಯಲ್ಲಿದೆ.

ಶಬರಿಮಲೆ: ಶಬರಿಮಲೆಗೆ ಮಹಿಳೆಯರಿಗೆ ವಯಸ್ಸಿನ ಮಿತಿ ಇಲ್ಲದೇ ಪ್ರವೇಶ ನೀಡಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿ  ದಿನಗಳೇ ಕಳೆದರೂ ಈ ಬಗ್ಗೆ ಚರ್ಚೆ ಇನ್ನೂ ಚಾಲ್ತಿಯಲ್ಲಿದೆ. ಇತ್ತ ಕೇರಳದ ದೇವಸ್ವಂ ಮಂಡಳಿ ಕೋರ್ಟ್ ಆದೇಶ ಮರುಪರಿಶೀಲನೆಗೆ ಅರ್ಜಿ ಸಲ್ಲಿಸುವುದಾಗಿ ಹೇಳಿದರೆ, ಅತ್ತ ಕೇರಳ ಸರ್ಕಾರ ಮರುಪರಿಶೀಲನೆ ಅರ್ಜಿ ಸಲ್ಲಿಸಲು ಮುಂದಾಗುವುದಿಲ್ಲ ಎಂದು ಹೇಳಿದೆ. 
ಕೋರ್ಟ್ ಆದೇಶ ಜಾರಿಗೊಳಿಸಲು ಮುಂದಾಗಿರುವ ಕೇರಳ ಸರ್ಕಾರದ ನಿಲುವಿನ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಆರ್ ಎಸ್ಎಸ್, ಕೇರಳ ಸರ್ಕಾರ ದೇವಾಲಯದ ಭಕ್ತಾದಿಗಳ ಭಾವನೆಗಳನ್ನು ಪರಿಗಣಿಸುತ್ತಿಲ್ಲ ಎಂದು ಹೇಳಿದೆ.  ಸರ್ಕಾರದ ನಿಲುವನ್ನು ದುರದೃಷ್ಟಕರ ಎಂದು ಹೇಳಿರುವ ಸುಪ್ರೀಂ ಕೋರ್ಟ್,  ಕೇರಳ ಸರ್ಕಾರ, ದೇವಾಲಯದ ಭಕ್ತಾದಿಗಳ ಭಾವನೆಯನ್ನು ಪರಿಗಣಿಸದೇ, ಸುಪ್ರೀಂ ಕೋರ್ಟ್ ತೀರ್ಪನ್ನು ತಕ್ಷಣದಿಂದಲೇ ಜಾರಿಗೊಳಿಸಲು ಮುಂದಾಗಿರುವುದು ದುರದೃಷ್ಟಕರ ಎಂದು ಹೇಳಿದೆ.
ದೇವಾಲಯಕ್ಕೆ ಸಂಬಂಧಪಟ್ಟವರನ್ನು ಒಗ್ಗೂಡಿಸಿ, ಧಾರ್ಮಿಕ ಆಚರಣೆಗಳನ್ನು ಪಾಲಿಸುವ ಹಕ್ಕಿನ ಬಗ್ಗೆ ಚರ್ಚೆ ನಡೆಸುವುದಾಗಿ ಆರ್ ಎಸ್ಎಸ್ ಹೇಳಿದೆ. ಸುಪ್ರೀಂ ಕೋರ್ಟ್ ತೀರ್ಪನ್ನು ಗೌರವಿಸುತ್ತೇವೆ, ಅಂತೆಯೇ  ದೇವಾಲಯಕ್ಕೆ ಸಂಬಂಧಪಟ್ಟವರೊಂದಿಗೆ ನ್ಯಾಯಾಂಗಕ್ಕೆ ಮೇಲ್ಮನವಿ ಸಲ್ಲಿಸುವ ಸಂಬಂಧ ಚರ್ಚಿಸಲಾಗುವುದು ಎಂದು ಆರ್ ಎಸ್ಎಸ್ ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್