ಸಿಇಸಿ ಒ. ಪಿ. ರಾವತ್ 
ದೇಶ

ರಾಜ್ಯ ವಿಧಾನಸಭೆ, ಲೋಕಸಭೆ ಉಪ ಚುನಾವಣೆ ದಿನಾಂಕ ಪ್ರಕಟ, ನ.3ಕ್ಕೆ ಮತದಾನ

ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 3 ರಂದು ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯದಲ್ಲಿ ಲೋಕಸಭೆ ಹಾಗೂ ರಾಮನಗರ, ಜಮಖಂಡಿ ವಿಧಾನಸಭೆ ಉಪಚುನಾವಣೆ ನಡೆಯಲಿದೆ.

ನವದೆಹಲಿ: ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 3 ರಂದು  ಶಿವಮೊಗ್ಗ, ಬಳ್ಳಾರಿ, ಮಂಡ್ಯದ ಲೋಕಸಭೆ ಹಾಗೂ ರಾಮನಗರ, ಜಮಖಂಡಿ ವಿಧಾನಸಭೆ  ಉಪಚುನಾವಣೆ ನಡೆಯಲಿದೆ.

ಇಂದು ಮಧ್ಯಾಹ್ನ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ  ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ  ಒ. ಪಿ. ರಾಮತ್  ಈ ವಿಷಯ ತಿಳಿಸಿದರು.

ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಬಳ್ಳಾರಿಯಲ್ಲಿ ಶ್ರೀರಾಮುಲು ಹಾಗೂ ಮಂಡ್ಯದಲ್ಲಿ ಸಿ. ಎಸ್. ಪುಟ್ಟರಾಜು  ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಇಂದಿನಿಂದಲೇ  ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3 ರಂದೇ  ನಡೆಯಲಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಡಿಸೆಂಬರ್ 11 ರಂದು ನಡೆಯಲಿದೆ ಎಂದು ರಾವತ್ ತಿಳಿಸಿದರು.

ಎರಡು ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣ ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರಿಂದ ಹಾಗೂ ಜಮಖಂಡಿ ಶಾಸಕ ಸಿದ್ದು ನ್ಯಾಮೇಗೌಡ  ಮೇ ತಿಂಗಳಲ್ಲಿ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಸ್ಥಾನಕ್ಕೆ  ಉಪಚುನಾವಣೆ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT