ಸಂಗ್ರಹ ಚಿತ್ರ 
ದೇಶ

ಲೈಂಗಿಕ ಕಿರುಕುಳ, ಅಶ್ಲೀಲ ಟೀಕೆಗಳಿಗೆ ವಿರೋಧ: ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದ ಕಿರಾತಕರು

ಲೈಂಗಿಕ ಕಿರುಕುಳ ಹಾಗೂ ಅಶ್ಲೀಲವಾಗಿ ಟೀಕೆಗಳ ವಿರುದ್ಧ ತಿರುಗಿಬಿದ್ದು ದನಿ ಎತ್ತಿದ್ದ ವಿದ್ಯಾರ್ಥಿನಿಯರ ಮೇಲೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ನಡೆದಿದೆ...

ಬಿಹಾರ: ಲೈಂಗಿಕ ಕಿರುಕುಳ ಹಾಗೂ ಅಶ್ಲೀಲವಾಗಿ ಟೀಕೆಗಳ ವಿರುದ್ಧ ತಿರುಗಿಬಿದ್ದು ದನಿ ಎತ್ತಿದ್ದ ವಿದ್ಯಾರ್ಥಿನಿಯರ ಮೇಲೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ನಡೆದಿದೆ. 
ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರ ಪರಿಣಾಮ 40 ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ. 
ದಪರ್ಖಾ ಗ್ರಾಮದಲ್ಲಿರುವ ಕಸ್ತೂರ್'ಬಾ ಗಾಂಧಿ ಶಾಲೆಯ ವಿದ್ಯಾರ್ಥಿನಿಯರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. 
ಶಾಲೆಯ ಹತ್ತಿರದಲ್ಲಿ ನೆಲೆಯೂರಿರುವ ಕೆಲ ಹುಡುಗರು ಸಾಮಾಜಘಾತುಕ ಶಕ್ತಿಗಳೊಂದಿಗೆ ಕೈಜೋಡಿಸಿದ್ದು, ಪ್ರತೀನಿತ್ಯ ಶಾಲೆಗೆ ಹೋಗುವ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುತ್ತಾರೆ. ಜೊತೆಗೆ ವಿದ್ಯಾರ್ಥಿನಿಯರ ವಸತಿ ನಿಲಯದ ಗೋಡೆಗಳ ಮೇಲೆ ಅಸಭ್ಯವಾಗಿ ಬರೆಯುತ್ತಿರುತ್ತಾರೆ. ಈ ಬಗ್ಗೆ ವಿದ್ಯಾರ್ಥಿನಿಯರು ಶಾಲೆಯ ಮೇಲ್ವಿಚಾರಕರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. 
ಇದರಂತೆ ಶನಿವಾರ ಯುವಕನೋರ್ವ ಶಾಲೆಯ ಗೋಡೆಯ ಮೇಲೆ ಅಸಭ್ಯವಾಗಿ ಬರಹ ಬರೆಯುತ್ತಿದ್ದ. ಇದನ್ನು ನೋಡಿನ್ನು ನೋಡಿದ ವಿದ್ಯಾರ್ಥಿನಿ ಯುವಕನನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಳು. 
ಕೆಲ ಸಮಯದ ಬಳಿಕ ಸ್ಥಳಕ್ಕೆ ಬಂದಿರುವ ಯುವಕರ ಗುಂಪು ಶಾಲೆಯ ಮೇಲೆ ದಾಳಿ ನಡೆಸಿ ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿದೆ. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಾಲಕಿಯರು ಹಾಗೂ ಯುವಕರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಹಲವು ವಿದ್ಯಾರ್ಥಿನಿಯರು ತೀವ್ರವಾಗಿ ಗಾಯಾಗೊಂಡಿದ್ದಾರೆಂದು ತಿಳಿದುಬಂದಿದೆ. 
ಪ್ರಕರಣ ಸಂಬಂಧ ಜಿಲ್ಲಾ ಮ್ಯಾಜಿಸ್ಟ್ರೇಟ್ ಬೈದ್ಯಾನಾಥ್ ಯಾವ್ ಅವರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳುವಂತೆ ಆದೇಶಿಸಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT