ಮುಂಬೈ: ಹೆತ್ತ ತಾಯಿಯನ್ನು ಹತ್ಯೆ ಮಾಡಿದ ಮಾಡೆಲ್ ಬಂಧನ
ತನ್ನ ಹೆತ್ತ ತಾಯಿಯನ್ನು ಹತ್ಯೆ ಮಾಡಿದ ಆರೋಪ ಮೇಲೆ ಮಾಡೆಲ್ ಒಬ್ಬರನ್ನು ಭಾನುವಾರ ಮುಂಬೈ ಪೊಲೀಸರು...
ಮುಂಬೈ: ತನ್ನ ಹೆತ್ತ ತಾಯಿಯನ್ನು ಹತ್ಯೆ ಮಾಡಿದ ಆರೋಪ ಮೇಲೆ ಮಾಡೆಲ್ ಒಬ್ಬರನ್ನು ಭಾನುವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಮಾಡೆಲ್ ಲಕ್ಷ್ಯ ಸಿಂಗ್ ಎಂದು ಗುರುತಿಸಲಾಗಿದ್ದು, ಶನಿವಾರ ತನ್ನ ಫ್ಯಾಷನ್ ಡಿಸೈನರ್ ತಾಯಿ ಸುನಿತಾ ಸಿಂಗ್ ಅವರನ್ನು ಹತ್ಯೆ ಮಾಡಿದ್ದಾನೆ.
ಸುನಿತಾ ಅವರ ತಲೆ ಮತ್ತು ಬೆನ್ನಿನ ಮೇಲೆ ಹಲವು ಗಾಯಗಳಾಗಿವೆ ಎಂದು ಒಶಿವಾರ ಪೊಲೀಸ್ ಠಾಣೆಯ ಹಿರಿಯ ಇನ್ಸ್ ಪೆಕ್ಟರ್ ಶೈಲೇಶ್ ಪಸಲವಾಡ್ ಅವರು ತಿಳಿಸಿದ್ದಾರೆ.
ಈ ಸಂಬಂಧ ಪಾಪಿ ಪುತ್ರನ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.
ಹೆತ್ತ ತಾಯಿಯ ಹತ್ಯೆ ಕಾರಣ ಇನ್ನೂ ತಿಳಿದು ಬಂದಿಲ್ಲ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.