ಶಬರಿಮಲೆ ದೇವಸ್ಥಾನ 
ದೇಶ

ಸುಪ್ರೀಂ ಕೋರ್ಟ್ ತೀರ್ಪು: ಸಿಎಂ ವಿಜಯನ್ ಸಭೆಗೆ ಶಬರಿಮಲೆ ತಂತ್ರಿಗಳು ಗೈರು

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಿದ ಸುಪ್ರೀಂ...

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಿದ ಸುಪ್ರೀಂ ಕೋರ್ಟ್​ ಆದೇಶ ಕುರಿತು ಚರ್ಚಿಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ದೇಗುಲದ ತಂತ್ರಿ( ಮುಖ್ಯ ಪುರೋಹಿತರು)ಗಳನ್ನು ಭಾನುವಾರ ಮಾತುಕತೆಗೆ ಆಹ್ವಾನಿಸಿದ್ದರು. ಆದರೆ ಮುಖ್ಯಮಂತ್ರಿಯ ಆಹ್ವಾನವನ್ನು ಪುರೋಹಿತರು ನಿರಾಕರಿಸಿದ್ದಾರೆ.
ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಕೇರಳ ಸರ್ಕಾರ ಮೊದಲು ನಿರ್ಧಾರ ತೆಗೆದುಕೊಳ್ಳಲಿ. ನಂತರ ನಾವು ಮಾತನಾಡಲು ಬರುತ್ತೇವೆ ಎಂದು ದೇಗುಲ ಮುಖ್ಯ ತಂತ್ರಿ ಮೋಹಾನಾರು ಕಂದಾರಾರು ಹೇಳಿದ್ದು, ದೇವಸ್ಥಾನ ವಿಚಾರದಲ್ಲಿ ಅವರ ಮಾತನ್ನೇ ಅಂತಿಮ ನಿರ್ಧಾರ ಎಂದು ಪರಿಗಣಿಸಲಾಗಿದೆ.
ಪಿಣರಾಯ್ ವಿಜಯನ್ ಅವರು ಈಗಾಗಲೇ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿದ್ದರಿಂದ ಅಲ್ಲಿನ ದೈವತ್ವಕ್ಕೆ ಹಾನಿಯಾಗುತ್ತದೆ. ಇಲ್ಲಿನ ಸಂಪ್ರದಾಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗಾಗಿ ಅದಕ್ಕೆ ರಾಜಿಯಾಗಲು ಆಗುವುದಿಲ್ಲ ಎಂದು ಮುಖ್ಯ ತಂತ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!