ನವದೆಹಲಿ: ಭಾರತ ಮತ್ತು ಫ್ರಾನ್ಸ್ ನಡುವೆ ಏರ್ಪಟ್ಟಿರುವ ರಫೇಲ್ ಯುದ್ಧ ವಿಮಾನ ಖರೀದಿ ವಿರುದ್ಧ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅ.10 ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಸೋಮವಾರ ಒಪ್ಪಿಗೆ ನೀಡಿದೆ.
ವಕೀಲ ವಿನೀತ್ ದಂಡ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು, ಅರ್ಜಿಯಲ್ಲಿ ರಫೇಲ್ ಒಪ್ಪಂದ ಕುರಿತ ವಿವರಗಳನ್ನು ಬಹಿರಂಗಪಡಿಸುವಂತೆ ಹಾಗೂ ಯುಪಿಎ-ಎನ್'ಡಿಎ ಅವಧಿಯಲ್ಲಿನ ರಫೇಲ್ ದರಗಳ ವ್ಯತ್ಯಾಸಗಳನ್ನು ಮುಚ್ಚಿದ ಲಕೋಟೆಯಲ್ಲಿ ಭದ್ರಪಡಿಸಿ ತಿಳಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಬೇಕೆಂದು ಆಗ್ರಹಿಸಿದ್ದಾರೆ.
ಈ ಸಾರ್ವಜನಿಕ ಅರ್ಜಿಯನ್ನು ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ನ್ಯಾಯಮೂರ್ತಿಗಳಾದ ಎಸ್.ಕೆ.ಕೌಲ್ ಮತ್ತು ಕೆ.ಎಂ.ಜೋಸೆಫ್ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಲಿದೆ.