ಶಬರಿಮಲೆ ದೇವಸ್ಥಾನ 
ದೇಶ

ಶಬರಿಮಲೆಗೆ ಮಹಿಳೆಯರ ಪ್ರವೇಶ: ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದ ಮಹಿಳೆ

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ರಾಷ್ಟ್ರೀಯ ಅಯ್ಯಪ್ಪ ಭಕ್ತರ ....

ನವದೆಹಲಿ: ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಒಕ್ಕೂಟದ ಅಧ್ಯಕ್ಷೆ ಶೈಲಜಾ ವಿಜಯನ್ ಸೋಮವಾರ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅನುಮತಿ ನೀಡಿರುವುದನ್ನು ವಿರೋಧಿಸಿ ದೇಶಾದ್ಯಂತ ಭಕ್ತರು ಪ್ರತಿಭಟನೆ ನಡೆಸುತ್ತಿದ್ದು, ಈ ಮಧ್ಯೆ ಕೇರಳದ ಎಲ್ ಡಿಎಫ್ ಸರ್ಕಾರ ಸುಪ್ರೀಂ ಕೋರ್ಟ್ ಆದೇಶಕ್ಕೆ ಮರು ಪರಿಶೀಲನಾ ಅರ್ಜಿ ಸಲ್ಲಿಸುವುದಿಲ್ಲ ಎಂದು ಹೇಳಿದ ನಂತರ ಪ್ರತಿಭಟನೆ ತೀವ್ರವಾಗಿದೆ.

ಈ ಸಂಬಂಧ ಶೈಲಜಾ ವಿಜಯನ್ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿ, ಎಲ್ಲಾ ವಯಸ್ಸಿನ ಮಹಿಳೆಯರು ಅಯ್ಯಪ್ಪ ದೇವಸ್ಥಾನ ಪ್ರವೇಶಿಸಬಹುದು ಎಂಬ ತೀರ್ಪು ಸಂಪೂರ್ಣವಾಗಿ ಅಸಮರ್ಥನೀಯವಾಗಿದ್ದು ವಿವೇಚನಾರಹಿತವಾಗಿದೆ ಮತ್ತು ತೀರ್ಪಿನಲ್ಲಿ ಸ್ಪಷ್ಟತೆಯಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ಕುರಿತು ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಕರೆದಿದ್ದ ಸಭೆಗೆ ಹೋಗಲು ಪಂಡಲಮ್ ಪ್ಯಾಲೆಸ್ ಮತ್ತು ಶಬರಿಮಲೆ ದೇವಸ್ಥಾನದ ಅರ್ಚಕರು ನಿರಾಕರಿಸಿದ್ದಾರೆ. ಪ್ಯಾಲೆಸ್ ಟ್ರಸ್ಟ್ ಸುಪ್ರೀಂ ಕೋರ್ಟ್ ನಲ್ಲಿ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಲು ನಿರ್ಧರಿಸಿದೆ.

ಶೈಲಜಾ ವಿಜಯನ್ ಸಲ್ಲಿಸಿರುವ ಮನವಿ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್, ಸುಪ್ರೀಂ ಕೋರ್ಟ್ ನ ತೀರ್ಪನ್ನು ಜಾರಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿದೆ. ಈ ವಿಚಾರದಲ್ಲಿ ಭಕ್ತರ ಜೊತೆ ಚರ್ಚೆ ಮಾಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದ್ದಾರೆ.

ಜನರ ನಂಬಿಕೆ, ಭಾವನೆಗಳ ಜೊತೆ ಹೋರಾಡಲು ಇದು ಸರ್ಕಾರದ ತೀರ್ಮಾನವಲ್ಲ, ಅಯ್ಯಪ್ಪ ಸ್ವಾಮಿಯ ಭಕ್ತರ ಹಿತಾಸಕ್ತಿಯನ್ನು ರಕ್ಷಿಸಲಾಗುವುದು. ಸರ್ಕಾರ ಮಾತುಕತೆಗೆ ಸದಾ ಸಿದ್ದವಿದೆ ಎಂದು ಹೇಳಿದ್ದಾರೆ.

ಈ ಮಧ್ಯೆ, ಸಾವಿರಾರು ವರ್ಷಗಳಿಂದ ಬಂದ ಸಂಪ್ರದಾಯವನ್ನು ಮುರಿಯಬಾರದು ಎಂದು ಅಯ್ಯಪ್ಪ ದೇವರ ಭಕ್ತರು ಚೆನ್ನೈಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇರಳ ಸರ್ಕಾರ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ಸೆಪ್ಟೆಂಬರ್ 28ರಂದು ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠ 10ರಿಂದ 50 ವರ್ಷದೊಳಗಿನ ಮಹಿಳೆಯರು ಅಯ್ಯಪ್ಪ ಸ್ವಾಮಿ ದೇವಾಲಯ ಪ್ರವೇಶಿಸಲು ಅನುಮತಿ ನೀಡಿ ತೀರ್ಪು ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT